ಬಂಟ್ವಾಳ: ಆಸ್ಪತ್ರೆಯಲ್ಲಿರುವಂತೆಯೇ ಬೆಡ್, ವೈದ್ಯಕೀಯ ಸೌಲಭ್ಯಗಳುಳ್ಳ ಸಾರಿಗೆ ಸುರಕ್ಷಾ – ಐಸಿಯು ಬಸ್ ಗೆ ಮಂಗಳವಾರ ಪೊಳಲಿ ಶ್ರೀರಾಜರಾಜೇಶ್ವರಿ ದೇವಸ್ಥಾನ ಸನ್ನಿಧಿಯಲ್ಲಿ ಚಾಲನೆ ನೀಡಲಾಯಿತು. ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಅವರ ಉಪಸ್ಥಿತಿಯಲ್ಲಿ ಉದ್ಘಾಟಿಸಿದರು.
ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತೆ ರೋಹಿಣಿ ಸಿಂಧೂರಿ, ದ.ಕ.ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ., ಕೆ.ಎಸ್. ಆರ್ಟಿಸಿ ಪುತ್ತೂರು ವಿಭಾಗ ನಿಯಂತ್ರಣಾಧಿಕಾರಿ ಜಯಕರ ಶೆಟ್ಟಿ, ಬಿಸಿರೋಡು ಘಟಕ ವ್ಯವಸ್ಥಾಪಕ ಶ್ರೀಶ ಭಟ್, ಅಧಿಕಾರಿಗಳಾದ ರಮೇಶ್ ಶೆಟ್ಟಿ, ರವೀನಾ, ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಡಾ. ಮಂಜಯ್ಯ ಶೆಟ್ಟಿ, ಮೊಕ್ತೇಸರರಾದ ತಾರನಾಥ ಆಳ್ವ, ಸೂರ್ಯ ನಾರಾಯಣ ರಾವ್, ದೇವಸ್ಥಾನದ ಸಿಒ.ಜಯಮ್ಮ, ದೇವಳದ ಪ್ರಧಾನ ಅರ್ಚಕ ಮಾದವ ಭಟ್, ಬೂಡ ಆದ್ಯಕ್ಷ ದೇವದಾಸ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.