ಬಂಟ್ವಾಳ: ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರ ಸ್ವಾಮ್ಯದ ಕಂಪೆನಿಗಳ ಸಾರ್ವಜನಿಕ ಹೊಣೆಗಾರಿಕಾ ನಿಧಿಯಿಂದ 1.4 ಕೋ.ರೂ.ವೆಚ್ಚದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ನೇತೃತ್ವದಲ್ಲಿ ಅನುಷ್ಠಾನಗೊಳಿಸಿದ ನಿಮಿಷಕ್ಕೆ ೫೦೦ ಲೀ. ಉತ್ಪಾದನಾ ಸಾಮರ್ಥ್ಯದ ನೂತನ ಆಕ್ಸಿಜನ್ ಘಟಕ ಮಂಗಳವಾರ ಉದ್ಘಾಟನೆಗೊಂಡಿತು.
ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಉಪಸ್ಥಿತಿಯಲ್ಲಿ ದ.ಕ.ಸಂಸದ ನಳಿನ್ ಕುಮಾರ್ ಕಟೀಲು ಅವರು ಘಟಕವನ್ನು ಉದ್ಘಾಟಿಸಿದರು. ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕಿಶೋರ್ ಕುಮಾರ್, ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್, ಬಂಟ್ವಾಳ ತಾ.ಪಂ.ಇಒ ರಾಜಣ್ಣ, ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಾ ಪ್ರಭು, ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಪುಷ್ಪಲತಾ, ಬಂಟ್ವಾಳ ಡಿವೈಎಸ್ಪಿ ವೆಲೆಂಟೈನ್ ಡಿಸೋಜ, ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ, ಪುರಸಭಾ ಸದಸ್ಯರಾದ ಹರಿಪ್ರಸಾದ್, ರೇಖಾ ಪೈ ಸಹಿತ ವಿವಿಧ ಮುಖಂಡರು, ಸ್ಥಳೀಯರು ಈ ಸಂದರ್ಭ ಉಪಸ್ಥಿತರಿದ್ದರು.