ದ.ಕ.ಜಿ.ಪಂ., ಕೃಷಿ ಇಲಾಖೆ ಹಾಗೂ ಬಂಟ್ವಾಳ ಕೃಷಿಕ ಸಮಾಜದ ಸಹಯೋಗದಲ್ಲಿ ಯಾಂತ್ರೀಕೃತ ಭತ್ತ ನಾಟಿ ಪ್ರಾತ್ಯಕ್ಷಿಕೆ ಕಾರ್ಯಾಗಾರಕ್ಕೆ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಗದ್ದೆಯಲ್ಲಿ ಚಾಲನೆ ನೀಡಲಾಯಿತು. ಪೊಳಲಿ ದೇವಸ್ಥಾನದ ಸುಮಾರು 2 ಎಕರೆ ವಿಸ್ತೀರ್ಣದಲ್ಲಿ ಭತ್ತದ ನಾಟಿ ಕಾರ್ಯ ನಡೆಯಲಿದೆ. ಕೃಷಿ ಸಂಜೀವಿನಿ, ರೋಟರಿ ಟಿಲ್ಲರನ್ನು ಕೂಡ ಈ ಸಂದರ್ಭದಲ್ಲಿ ಪ್ರದರ್ಶನ ಮಾಡಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ದ.ಕ.ಸಂಸದ ನಳಿನ್ ಕುಮಾರ್ ಕಟೀಲು ಹಾಗೂ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಭತ್ತದ ನಾಟಿ ಮಾಡುವ ಮೂಲಕ ಚಾಲನೆ ನೀಡಿದರು. ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್., ಬಂಟ್ವಾಳ ಸಹಾಯಕ ಕೃಷಿ ನಿರ್ದೇಶಕ ಚೆನ್ನಕೇಶವಮೂರ್ತಿ, ತಾಂತ್ರಿಕ ಕೃಷಿ ಅಧಿಕಾರಿ ನಂದನ್ ಶೆಣೈ, ಕೃಷಿ ಅಧಿಕಾರಿ ಬಿ.ಬಿ.ಅನಗವಾಡಿ, ಪಾಣೆಮಂಗಳೂರು ಸಹಾಯಕ ಅಧಿಕಾರಿ ಕೊರಗಪ್ಪ, ಆತ್ಮ ಎಟಿಎಂ ಹನುಮಂತ ಕಲ್ಗಿ, ಕೃಷಿಕ ಸಮಾಜದ ಅಧ್ಯಕ್ಷ ಪದ್ಮರಾಜ್ ಬಲ್ಲಾಳ್ ಮವಂತೂರು, ರಾಜ್ಯ ಪ್ರತಿನಿಧಿ ಪದ್ಮನಾಭ ರೈ, ಸದಸ್ಯರಾದ ಗಣೇಶ್ ಶೆಟ್ಟಿ, ಎಸ್.ಎನ್ ಹೊಳ್ಳ, ಪೊಳಲಿ ಸಿಎ ಬ್ಯಾಂಕ್ ಉಪಾಧ್ಯಕ್ಷ ವೆಂಕಟೇಶ್ ನಾವಡ, ಬೂಡಾ ಅಧ್ಯಕ್ಷ ಬಿ.ದೇವದಾಸ್ ಶೆಟ್ಟಿ, ಬಂಟ್ವಾಳ ಬಿಜೆಪಿ ದೇವಪ್ಪ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.
About the Author
Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ಅಕೌಂಟ್ ನಂಬ್ರ ಹೀಗಿದೆ. For Online Transaction: Account Name: Harish M G, Bank: Karnataka bank Account No: 0712500100982501 IFSC Code: KARB0000071 ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ
Be the first to comment on "ಪೊಳಲಿ ದೇವಸ್ಥಾನದ ಗದ್ದೆಯಲ್ಲಿ ಭತ್ತದ ನಾಟಿಗೆ ಚಾಲನೆ"