ಬಂಟ್ವಾಳ

ಪೊಳಲಿ ದೇವಸ್ಥಾನದ ಗದ್ದೆಯಲ್ಲಿ ಭತ್ತದ ನಾಟಿಗೆ ಚಾಲನೆ

ದ.ಕ.ಜಿ.ಪಂ., ಕೃಷಿ ಇಲಾಖೆ ಹಾಗೂ ಬಂಟ್ವಾಳ ಕೃಷಿಕ ಸಮಾಜದ ಸಹಯೋಗದಲ್ಲಿ ಯಾಂತ್ರೀಕೃತ ಭತ್ತ ನಾಟಿ ಪ್ರಾತ್ಯಕ್ಷಿಕೆ ಕಾರ್ಯಾಗಾರಕ್ಕೆ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಗದ್ದೆಯಲ್ಲಿ ಚಾಲನೆ ನೀಡಲಾಯಿತು. ಪೊಳಲಿ ದೇವಸ್ಥಾನದ ಸುಮಾರು 2 ಎಕರೆ ವಿಸ್ತೀರ್ಣದಲ್ಲಿ ಭತ್ತದ ನಾಟಿ ಕಾರ್ಯ ನಡೆಯಲಿದೆ. ಕೃಷಿ ಸಂಜೀವಿನಿ, ರೋಟರಿ ಟಿಲ್ಲರನ್ನು ಕೂಡ ಈ ಸಂದರ್ಭದಲ್ಲಿ ಪ್ರದರ್ಶನ ಮಾಡಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ದ.ಕ.ಸಂಸದ ನಳಿನ್ ಕುಮಾರ್ ಕಟೀಲು ಹಾಗೂ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಭತ್ತದ ನಾಟಿ ಮಾಡುವ ಮೂಲಕ ಚಾಲನೆ ನೀಡಿದರು. ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್., ಬಂಟ್ವಾಳ ಸಹಾಯಕ ಕೃಷಿ ನಿರ್ದೇಶಕ ಚೆನ್ನಕೇಶವಮೂರ್ತಿ, ತಾಂತ್ರಿಕ ಕೃಷಿ  ಅಧಿಕಾರಿ ನಂದನ್ ಶೆಣೈ, ಕೃಷಿ ಅಧಿಕಾರಿ ಬಿ.ಬಿ.ಅನಗವಾಡಿ, ಪಾಣೆಮಂಗಳೂರು ಸಹಾಯಕ ಅಧಿಕಾರಿ ಕೊರಗಪ್ಪ, ಆತ್ಮ ಎಟಿಎಂ ಹನುಮಂತ ಕಲ್ಗಿ, ಕೃಷಿಕ ಸಮಾಜದ ಅಧ್ಯಕ್ಷ ಪದ್ಮರಾಜ್ ಬಲ್ಲಾಳ್ ಮವಂತೂರು, ರಾಜ್ಯ ಪ್ರತಿನಿಧಿ ಪದ್ಮನಾಭ ರೈ, ಸದಸ್ಯರಾದ ಗಣೇಶ್ ಶೆಟ್ಟಿ, ಎಸ್.ಎನ್ ಹೊಳ್ಳ, ಪೊಳಲಿ ಸಿಎ ಬ್ಯಾಂಕ್ ಉಪಾಧ್ಯಕ್ಷ ವೆಂಕಟೇಶ್ ನಾವಡ, ಬೂಡಾ ಅಧ್ಯಕ್ಷ ಬಿ.ದೇವದಾಸ್ ಶೆಟ್ಟಿ, ಬಂಟ್ವಾಳ ಬಿಜೆಪಿ ದೇವಪ್ಪ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ