ವಿಟ್ಲ – ಪುತ್ತೂರು ರಸ್ತೆಯ ರೀಯಾ ಪ್ಲಾನೆಟ್ ನಲ್ಲಿ ನೂತನವಾಗಿ ಮಾಧ್ಯಮ ಮತ್ತು ಮಾಹಿತಿ ಕೇಂದ್ರ ಕಚೇರಿ ಸೋಮವಾರ ಶುಭಾರಂಭಗೊಂಡಿತು.
ಒಡಿಯೂರು ಶ್ರೀಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಅವರು ವಿಟ್ಲ ಸೇವಾ ಕೇಂದ್ರವನ್ನು ಉದ್ಘಾಟಿಸಿ ಆಶೀರ್ವಚನ ನೀಡಿ ಮಾತನಾಡಿ, ಮಾಧ್ಯಮ ಮತ್ತು ಮಾಹಿತಿ ಕೇಂದ್ರ ಒಂದೇ ಸೂರಿನಡಿ ಕಾರ್ಯನಿರ್ವಹಿಸುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ. ಇಂತಹ ಕೇಂದ್ರಗಳ ಮೂಲಕ ಜನರಿಗೆ ಉತ್ತಮ ಸೇವೆ ನೀಡಲು ಸಾಧ್ಯವಿದೆ ಎಂದರು.
ಇರ್ಷಾದ್ ದಾರಿಮಿ ಮಿತ್ತಬೈಲು ದುಅ ನೆರವೇರಿಸಿದರು. ವಿಟ್ಲ ಕೇಂದ್ರ ಜುಮಾ ಮಸೀದಿ ಖತೀಬು ಮಹಮ್ಮದಾಲಿ ಫೈಝಿ ಇರ್ಫಾನಿ ಮತ್ತು ವಿಟ್ಲ ಟೌನ್ ಮಸೀದಿ ಖತೀಬು ಅಬ್ಬಾಸ್ ಮದನಿ ಶುಭ ಹಾರೈಸಿದರು.
ಶಾಸಕರಾದ ಸಂಜೀವ ಮಠಂದೂರು, ಯು.ಟಿ.ಖಾದರ್, ಮಾಜಿ ಸಚಿವ ಬಿ.ರಮಾನಾಥ ರೈ, ಎಂ.ಫ್ರೆಂಡ್ಸ್ ಅಧ್ಯಕ್ಷ ಹನೀಫ್ ಹಾಜಿ ಗೋಳ್ತಮಜಲು, ಸ್ಥಾಪಕಾಧ್ಯಕ್ಷ ರಶೀದ್ ವಿಟ್ಲ, ಪತ್ರಕರ್ತ ಉದಯಶಂಕರ ನೀರ್ಪಾಜೆ, ಲಯನ್ಸ್ ಕ್ಲಬ್ ಜಿಲ್ಲಾ ಗವರ್ನರ್ ಡಾ. ಗೀತಾ ಪ್ರಕಾಶ್, ಪಟ್ಟಣ ಪಂಚಾಯತ್ ಅಧ್ಯಕ್ಷೆ ಚಂದ್ರಕಾಂತಿ ಶೆಟ್ಟಿ, ಮುಖ್ಯಾಧಿಕಾರಿ ಮಾಲಿನಿ, ಸದಸ್ಯರಾದ ಅರುಣ್ ಎಂ. ವಿಟ್ಲ, ರಾಮ್ ದಾಸ್ ಶೆಣೈ, ಡಿ ಗ್ರೂಪ್ ಅಧ್ಯಕ್ಷ ಖಲಂದರ್ ಪರ್ತಿಪ್ಪಾಡಿ, ಶಾಕಿರ್ ಅಳಕೆಮಜಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ ಉಷಾ, ರಮಾನಾಥ ವಿಟ್ಲ, ಕೃಷ್ಣಯ್ಯ ಕೆ.ವಿಟ್ಲ, ಕಟ್ಟಡ ಮಾಲಕ ಆರ್.ಕೆ.ಅಬ್ದುಲ್ಲ ಹಾಜಿ, ಅಳಿಕೆ ಗ್ರಾಪಂ ಮಾಜಿ ಅಧ್ಯಕ್ಷ ಪದ್ಮನಾಭ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.ನೌಫಲ್ ಕುಡ್ತಮುಗೇರು ನಿರೂಪಿಸಿದರು. ಮುಹಮ್ಮದಾಲಿ ವಿಟ್ಲ ವಂದಿಸಿದರು