ಬಂಟ್ವಾಳ: ವಿವಿಧ ಸಂಘಟನೆಗಳ ಸಹಯೋಗದಲ್ಲಿ ಗದಗ್ ಜಿಲ್ಲೆ ನರಗುಂದದಲ್ಲಿ ಜುಲೈ 21ರಂದು ನಡೆಯಲಿರುವ 41ನೇ ರೈತ ಹುತಾತ್ಮ ದಿನಾಚರಣೆ ಸಂದರ್ಭದ ರಾಜ್ಯಮಟ್ಟದ ಸಮಾವೇಶಕ್ಕೆ ದ.ಕ.ಜಿಲ್ಲೆಯಿಂದ 150ಕ್ಕೂ ಅಧಿಕ ಮಂದಿ ಪಾಲ್ಗೊಳ್ಳಲಿದ್ದಾರೆ ಎಂದು ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ರವಿಕಿರಣ್ ಪುಣಚ ಬಂಟ್ವಾಳದಲ್ಲಿ ಹೇಳಿದ್ದಾರೆ.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅಂದು ಕೃಷಿ ಉಳಿಸಿ-ಪ್ರಜಾಪ್ರಭುತ್ವ ರಕ್ಷಿಸಿ ಸಂಕಲ್ಪ ದಿನ ಹಾಗೂ ರಾಜ್ಯ ಮಟ್ಟದ ಬೃಹತ್ ಸಮಾವೇಶ ನಡೆಯಲಿದ್ದು, ಮುಂದಿನ ಚುನಾವಣೆಯಲ್ಲಿ ಈ ಸರಕಾರವನ್ನು ಕಿತ್ತೊಗೆಯುವ ತನಕ ಹೋರಾಟ ಮುಂದುವರಿಯಲಿದೆ. ಈ ನಿಟ್ಟಿನಲ್ಲಿ ನಮ್ಮ ಜಿಲ್ಲೆಯಿಂದಲೂ ಹೆಚ್ಚಿನ ರೈತರು ಪಾಲ್ಗೊಳ್ಳಲು ರೈತ ಹೋರಾಟಗಾರರನ್ನು ಸಂಪರ್ಕಿಸಲಾಗುತ್ತಿದೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಸಂಘದ ಜಿಲ್ಲಾಧ್ಯಕ್ಷ ಓಸ್ವಾಲ್ಡ್ ಫೆರ್ನಾಂಡೀಸ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಪ್ರೇಮನಾಥ ಶೆಟ್ಟಿ, ಬಂಟ್ವಾಳ ಸಂಘಟನಾ ಕಾರ್ಯದರ್ಶಿ ಸದಾನಂದ ಶೀತಲ್ ಭಾಗವಹಿಸಿದ್ದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…