ನೆರೆಯ ಕೇರಳ ರಾಜ್ಯದ ತಿರುವನಂತಪುರದಲ್ಲಿ ಝಿಕಾ ವೈರಸ್ ರೋಗ ಪ್ರಕರಣಗಳು ವರದಿಯಾಗುತ್ತಿದ್ದು, ಗಡಿ ಭಾಗದಲ್ಲಿರುವ ದಕ್ಷಿಣ ಕನ್ನಡ ಜಿಲ್ಲೆಗೆ ಕೇರಳದಿಂದ ಸಾಕಷ್ಟು ಜನರು ಶಿಕ್ಷಣ, ಆರೋಗ್ಯ ಸಂಬಂಧಿ ಕಾರ್ಯಗಳಿಗೆ ಬಂದು – ಹೋಗುವುದು ಸಾಮಾನ್ಯವಾಗಿರುವುದರಿಂದ, ದ.ಕ.ಜಿಲ್ಲೆಯಲ್ಲಿ ಈ ರೋಗ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳುವುದು ಅವಶ್ಯಕವಾಗಿರುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.