





ಬಂಟ್ವಾಳ: ಪೆರಾಜೆ ಮತ್ತು ಬರಿಮಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಹುಗ್ರಾಮ ತ್ಯಾಜ್ಯ ಘಟಕ ಮತ್ತು ತ್ಯಾಜ್ಯ ವಿಲೇವಾರಿಯ ಬಗ್ಗೆ ಸಭೆಯು ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಅಧ್ಯಕ್ಷತೆಯಲ್ಲಿ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಮೂರೂ ಗ್ರಾಮಗಳ ಕಸ ವಿಲೇವಾರಿಯನ್ನು ಜಂಟಿಯಾಗಿ ಯಾವ ರೀತಿಯಾಗಿ ಸಮರ್ಪಕವಾಗಿ ಮಾಡಬಹುದು ಮತ್ತು ಈ ಕಾರ್ಯಕ್ಕಾಗಿ ವಿನಿಯೋಗಿಸಬೇಕಾದ ಖರ್ಚಿಗಾಗಿ ಹೇಗೆ ಸಂಪನ್ಮೂಲ ಕ್ರೋಢೀಕರಿಸಬಹುದು ಎನ್ನುವ ಬಗ್ಗೆ ವಿವಿಧ ರೀತಿಯ ಅಭಿಪ್ರಾಯಗಳು ಮೂಡಿಬಂದವು. ಅತೀ ಶಿಘ್ರವಾಗಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಉಪಸ್ಥಿತಿಯಲ್ಲಿ ಮತ್ತೊಮ್ಮೆ ಸಭೆ ನಡೆಸಿ, ಅವರ ನಿರ್ದೇಶನದ ಪ್ರಕಾರ ಅಂತಿಮ ನಿರ್ಣಯವನ್ನು ಕೈಗೊಳ್ಳಲಾಗುವುದು ಮತ್ತು ಈ ವಿಚಾರವಾಗಿ ಎಲ್ಲರೂ ಸಹಕರಿಸಬೇಕು ಎಂದು ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ವಿನಂತಿಸಿಕೊಂಡರು.
ಪೆರಾಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಮೋಹಿನಿ, ಉಪಾಧ್ಯಕ್ಷ ಉಮ್ಮರ್, ಅಭಿವೃದ್ಧಿ ಅಧಿಕಾರಿ ಶಂಭು ಕುಮಾರ್ ಶರ್ಮಾ, ಬರಿಮಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಶಶಿಕಲಾ, ಉಪಾಧ್ಯಕ್ಷ ಸದಾಶಿವ.ಜಿ, ಅಭಿವೃದ್ಧಿ ಅಧಿಕಾರಿ ಲಕ್ಷ್ಮಣ. ಎಚ್. ಕೆ, ಮಾಣಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪ್ರೀತಿ ಡಿನ್ನಾ ಪಿರೇರಾ, ಸದಸ್ಯರುಗಳಾದ ಸುದೀಪ್ ಕುಮಾರ್ ಶೆಟ್ಟಿ, ಇಬ್ರಾಹಿಂ.ಕೆ.ಮಾಣಿ, ಮೆಲ್ವಿನ್ ಕಿಶೋರ್ ಮಾರ್ಟಿಸ್, ರಮಣಿ.ಡಿ.ಪೂಜಾರಿ ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾರಾಯಣ ಗಟ್ಟಿ ಸ್ವಾಗತಿಸಿ, ವಂದಿಸಿದರು.
Be the first to comment on "ಬಹುಗ್ರಾಮ ತ್ಯಾಜ್ಯ ಘಟಕ: ಮಾಣಿ ಗ್ರಾಪಂನಲ್ಲಿ ಸಭೆ"