ಬಂಟ್ವಾಳ: ಅಮ್ಮುಂಜೆ ಪರಿಸರದ 5 ಎಕ್ರೆ ಹಡಿಲು ಭೂಮಿಯಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಬಿಜೆಪಿ ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿ ಮುಂದಾಳತ್ವದಲ್ಲಿ ನಡೆದ ಕೃಷಿ ಚಟುವಟಿಕೆಗಳಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಭಾನುವಾರ ಚಾಲನೆ ನೀಡಿದರು.
ಬಂಟ್ವಾಳ ತಾಲೂಕಿನಲ್ಲಿ ಸುಮಾರು 600 ಎಕ್ರೆಯಷ್ಟು ಹಡಿಲು ಬಿದ್ದ ಕೃಷಿ ಭೂಮಿಗೆ ಕಾಯಕಲ್ಪ ನೀಡಲು ಯುವಮೋರ್ಚಾ ಮುಂದಾಗಿದೆ ಎಂದು ಈ ಸಂದರ್ಭ ಅವರು ಹೇಳಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ, ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುದರ್ಶನ್ ಬಜ, ಬಿಜೆಪಿ ಬಂಟ್ವಾಳ ಯುವಮೋರ್ಚಾ ಅಧ್ಯಕ್ಷ ಪ್ರದೀಪ್ ಅಜ್ಜಿಬೆಟ್ಟು, ಕ್ಷೇತ್ರ ಪ್ರಧಾನ ಕಾರ್ಯದರ್ಶಿ ಡೊಂಬಯ್ಯ ಅರಳ, ಕ್ಷೇತ್ರ ಕಾರ್ಯದರ್ಶಿ ರಮನಾಥ ರಾಯಿ, ಅಂಮುಂಜೆ ಗ್ರಾಮಪಂಚಾಯತ್ ಅಧ್ಯಕ್ಷರಾದ ವಾಮನ ಆಚಾರ್ಯ ,ಉಪಾಧ್ಯಕ್ಷರಾದ ಪ್ರಮೀಳಾ ಜಿಲ್ಲೆ, ಕ್ಷೇತ್ರದ ಬಿಜೆಪಿ ವಿವಿಧ ಘಟಕಗಳ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
Be the first to comment on "ಅಮ್ಮುಂಜೆ ಪರಿಸರದ 5 ಎಕ್ರೆ ಹಡಿಲು ಭೂಮಿಯಲ್ಲಿ ಕೃಷಿ ಚಟುವಟಿಕೆಗಳಿಗೆ ಶಾಸಕ ರಾಜೇಶ್ ನಾಯ್ಕ್ ಚಾಲನೆ"