ಬಂಟ್ವಾಳ

ಅಮ್ಮುಂಜೆ ಪರಿಸರದ 5 ಎಕ್ರೆ ಹಡಿಲು ಭೂಮಿಯಲ್ಲಿ ಕೃಷಿ ಚಟುವಟಿಕೆಗಳಿಗೆ ಶಾಸಕ ರಾಜೇಶ್ ನಾಯ್ಕ್ ಚಾಲನೆ

ಬಂಟ್ವಾಳ: ಅಮ್ಮುಂಜೆ ಪರಿಸರದ 5 ಎಕ್ರೆ ಹಡಿಲು ಭೂಮಿಯಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಬಿಜೆಪಿ ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿ ಮುಂದಾಳತ್ವದಲ್ಲಿ ನಡೆದ ಕೃಷಿ ಚಟುವಟಿಕೆಗಳಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಭಾನುವಾರ ಚಾಲನೆ ನೀಡಿದರು.

ಬಂಟ್ವಾಳ ತಾಲೂಕಿನಲ್ಲಿ ಸುಮಾರು 600 ಎಕ್ರೆಯಷ್ಟು ಹಡಿಲು ಬಿದ್ದ ಕೃಷಿ ಭೂಮಿಗೆ ಕಾಯಕಲ್ಪ ನೀಡಲು ಯುವಮೋರ್ಚಾ ಮುಂದಾಗಿದೆ ಎಂದು ಈ ಸಂದರ್ಭ ಅವರು ಹೇಳಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ,  ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುದರ್ಶನ್ ಬಜ,  ಬಿಜೆಪಿ ಬಂಟ್ವಾಳ ಯುವಮೋರ್ಚಾ ಅಧ್ಯಕ್ಷ ಪ್ರದೀಪ್ ಅಜ್ಜಿಬೆಟ್ಟು, ಕ್ಷೇತ್ರ ಪ್ರಧಾನ ಕಾರ್ಯದರ್ಶಿ ಡೊಂಬಯ್ಯ ಅರಳ, ಕ್ಷೇತ್ರ ಕಾರ್ಯದರ್ಶಿ ರಮನಾಥ ರಾಯಿ, ಅಂಮುಂಜೆ ಗ್ರಾಮಪಂಚಾಯತ್ ಅಧ್ಯಕ್ಷರಾದ ವಾಮನ ಆಚಾರ್ಯ ,ಉಪಾಧ್ಯಕ್ಷರಾದ ಪ್ರಮೀಳಾ  ಜಿಲ್ಲೆ, ಕ್ಷೇತ್ರದ  ಬಿಜೆಪಿ ವಿವಿಧ ಘಟಕಗಳ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts