ಬಂಟ್ವಾಳ: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ವಿದ್ವಾಸರು, ಸಂಶೋಧಕರು, ಸಾಹಿತಿ, ಕಲಾವಿದರು ಮತ್ತು ಸಂಘಟಕರಿಗೆ ನೀಡುವ ಚಾವಡಿ ತಮ್ಮನ ಬೊಕ್ಕ ಪಾತೆರೆಕತೆ ಕಾರ್ಯಕ್ರಮದ ಅಂಗವಾಗಿ ಬಂಟ್ವಾಳದ ಬಿ.ಸಿ.ರೋಡಿನ ದೈಪಲ ಎಂಬಲ್ಲಿರುವ ಸಾಹಿತಿ, ಸಂಘಟಕ ಮತ್ತು ಪತ್ರಕರ್ತ ಡಿ.ಎಂ.ಕುಲಾಲ್ ಅವರ ಮನೆಗೆ ತೆರಳಿ ಅವರನ್ನು ಗೌರವಿಸಿ, ಸನ್ಮಾನಿಸಲಾಯಿತು.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಜಿ.ಕತ್ತಲಸಾರ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಸನ್ಮಾನ ಕಾರ್ಯಕ್ರಮವನ್ನು ನೆರವೇರಿಸಿದರು. ಈ ಸಂದರ್ಭ ಮಾಜಿ ಅಧ್ಯಕ್ಷ ಎ.ಸಿ.ಭಂಡಾರಿ, ಸದಸ್ಯರಾದ ಮಲ್ಲಿಕಾ ಶೆಟ್ಟಿ, ನಿಟ್ಟೆ ಶಶಿಧರ್ ಶೆಟ್ಟಿ, ಬುಡ ಅಧ್ಯಕ್ಷ ಬಿ.ದೇವದಾಸ್ ಶೆಟ್ಟಿ, ಪುರಸಭಾ ಸದಸ್ಯ ಹರಿಪ್ರಸಾದ್ ಉಪಸ್ಥಿತರಿದ್ದರು. ಸದಸ್ಯರಾದ ಚೇತಕ್ ಪೂಜಾರಿ ಸನ್ಮಾನ ಪತ್ರ ವಾಚಿಸಿದರು. ನರೇಂದ್ರ ಕೆರೆಕಾಡು ಸ್ವಾಗತಿಸಿದರು. ಅಕಾಡೆಮಿಯ ರಿಜಿಸ್ಟ್ರಾರ್ ಕವಿತಾ ವಂದಿಸಿದರು. ನಾಗೇಶ್ ಕುಲಾಲ್ ಕುಳಾಯಿ ಕಾರ್ಯಕ್ರಮ ನಿರ್ವಹಿಸಿದರು.
Be the first to comment on "ಡಿ.ಎಂ.ಕುಲಾಲ್ ಅವರಿಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯಿಂದ ‘ಚಾವಡಿ ತಮ್ಮನ’"