ಬಂಟ್ವಾಳದಲ್ಲಿ ಮತ್ತೊಂದು ಗಾಂಜಾ ಕೇಸ್: ಒಬ್ಬನ ಸೆರೆ, ಸೊತ್ತುಗಳು ವಶಕ್ಕೆ

ಬಂಟ್ವಾಳ: ಬಂಟ್ವಾಳ ತಾಲೂಕಿನ ಸಜಿಪಮುನ್ನೂರು ಗ್ರಾಮದ ಕಂದೂರು ಎಂಬಲ್ಲಿ ಗಾಂಜಾ ಸಾಗಾಟ ಪ್ರಕರಣವೊಂದನ್ನು ಬಂಟ್ವಾಳ ನಗರ ಪೊಲೀಸರು ಪತ್ತೆಹಚ್ಚಿದ್ದು, ಈ ಪೈಕಿ ಇಲಿಯಾಸ್ ಎಂಬಾತನನ್ನು ಬಂಧಿಸಿದ್ದಾರೆ. ಮುಡಿಪು ಕಡೆಯಿಂದ ಮೆಲ್ಕಾರ್ ಕಡೆಗೆ  ವ್ಯಕ್ತಿಯೋರ್ವರು ಬೈಕ್ ಒಂದರಲ್ಲಿ  ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡಲು ಸಾಗಾಟ ಮಾಡುತ್ತಿರುವುದಾಗಿ ತಿಳಿದು  ಬಂದ ಮೇರೆಗೆ  ಎಸ್.ಐ. ಅವಿನಾಶ್, ಸಿಬ್ಬಂದಿಗಳ ಜೊತೆಯಲ್ಲಿ ಸಜಿಪಮುನ್ನೂರು ಗ್ರಾಮದ, ಕಂದೂರು ಎಂಬಲ್ಲಿ ವಾಹನ ತಪಾಸಣೆ ಮಾಡುತ್ತಿದ್ದ  ಸಮಯ ಮುಡಿಪು ಕಡೆಯಿಂದ ಬೈಕ್ ನಲ್ಲಿ ಬಂದ ಇಲಿಯಾಸ್ (36) ನನ್ನು ತಡೆದು ವಿಚಾರಿಸಿದಾಗ ಗಾಂಜಾವನ್ನು ವಶದಲ್ಲಿ ಇಟ್ಟುಕೊಂಡಿರುವುದು ಕಂಡುಬಂದಿದ್ದು, ಈತನಿಂದ 30 ಸಾವಿರ ರೂ ಮೌಲ್ಯದ 1430 ಗ್ರಾಂ ತೂಕದ ಗಾಂಜಾ 10 ಪ್ಯಾಕ್  ಒ.ಸಿ.ಬಿ.  ಸ್ಲಿಮ್ ಪ್ರೀಮಿಯಮ್ ಎಂದು ಅಂಗ್ಲ ಭಾಷೆಯಲ್ಲಿ ಬರೆದ ಚಿಕ್ಕ  ಪ್ಯಾಕೆಟ್ ಗಳು  ಇದ್ದು, ಅವುಗಳ ಬಗ್ಗೆ ವಿಚಾರಿಸಲಾಗಿ,  ಗಾಂಜಾ ಸೇವನೆಗೆ ಬಳಸುವ  ಸ್ಟ್ರಿಪ್ ಆಗಿರುತ್ತದೆ. ಗಾಂಜಾ ಸಾಗಾಟಕ್ಕೆ ಬಳಸಿದ  ಆಕ್ಟಿವಾ ಹಾಗೂ ಸೇವನೆಗೆ ಬಳಸುವ  ಸ್ಟ್ರಿಪ್ ನ್ನು   ಸ್ವಾಧೀನಪಡಿಸಿಕೊಳ್ಳಲಾಗಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗಿದೆ.

ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಹೃಷಿಕೇಷ್ ಭಗವಾನ್ ಸೋನಾವಣೆ, ಹೆಚ್ಚುವರಿ  ಪೊಲೀಸ್ ಅಧೀಕ್ಷಕರಾದ ಭಾಸ್ಕರ ಒಕ್ಕಲಿಗ ನಿರ್ದೇಶನದಂತೆ ಬಂಟ್ವಾಳ ಪೊಲೀಸ್ ಉಪಾಧೀಕ್ಷಕರಾದ ವೆಲೈಂಟೈನ್ ಡಿಸೋಜಾ ಆದೇಶದಂತೆ ಬಂಟ್ವಾಳ ನಗರ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಣಕರಾದ ಚೆಲುವರಾಜು‌,  ಉಪನಿರೀಕ್ಷಕರಾದ ಅವಿನಾಶ್, ಎ.ಎಸ್.ಐ ಗಿರೀಶ್ ಮತ್ತು ಬಂಟ್ವಾಳ ಡಿ.ವೈ.ಎಸ್.ಪಿ ವಿಶೇಷ ತಂಡದ ಸಿಬ್ಬಂದಿ ಉದಯ ರೈ, ಪ್ರವೀಣ್ ಎಂ, ಪ್ರಶಾಂತ್, ಇರ್ಷಾದ್ ಪಿ,  ಗೋಣಿಬಸಪ್ಪ, ಕುಮಾರ್ ಎಚ್.ಕೆ ಮತ್ತು ವಿವೇಕ್, ರಾಘವೇಂದ್ರ ಕಾರ್ಯಾಚರಣೆಯಲ್ಲಿ ಭಾಗವಹಿಸಿರುತ್ತಾರೆ. ಈ ಕಾರ್ಯಾಚರಣೆಗೆ ಅಧೀಕ್ಷಕರು ಪ್ರಶಂಸಿಸಿ‌ ಬಹುಮಾನವನ್ನು ಘೋಷಿಸಿರುತ್ತಾರೆ.

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬಂಟ್ವಾಳದಲ್ಲಿ ಮತ್ತೊಂದು ಗಾಂಜಾ ಕೇಸ್: ಒಬ್ಬನ ಸೆರೆ, ಸೊತ್ತುಗಳು ವಶಕ್ಕೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*