ಕನ್ನಡಪ್ರಭದ ಹಿರಿಯ ವರದಿಗಾರ ಡಾ.ಸಂದೀಪ್ ವಾಗ್ಲೆ ಅವರಿಗೆ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿ

ಸೌಹಾರ್ದತೆ ಮತ್ತು ಮಾನವೀಯ ಮೌಲ್ಯವನ್ನು ಪ್ರತಿ ಬಿಂಬಿಸುವ ವರದಿಗೆ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ನೀಡಲಾಗುವ
ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಕನ್ನಡ ಪ್ರಭ ದಿನಪತ್ರಿಕೆಯ ಹಿರಿಯ ವರದಿಗಾರ ಡಾ.ಸಂದೀಪ್ ವಾಗ್ಲೆ ಆಯ್ಕೆಯಾಗಿದ್ದಾರೆ.

ಕನ್ನಡ ಪ್ರಭ ದಿನ ಪತ್ರಿಕೆಯಲ್ಲಿ 2020, ನವಂಬರ್ 25ರಂದು ಪ್ರಕಟಗೊಂಡ ಸಂದೀಪ್ ವಾಗ್ಲೆ ಅವರ ವರದಿ‘ ಕೋಮು ಸೌಹಾರ್ದ ತೆಗೆ ಸಾಕ್ಷಿ-ಸೇತುವಾದ ಯಕ್ಷಗಾನ ಎಂಬ ವರದಿಗೆ ಪ್ರಶಸ್ತಿ ಲಭಿಸಿದೆ. ಪ್ರಶಸ್ತಿಯು ರೂ. 5,001 ನಗದು, ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆಯನ್ನು ಒಳಗೊಂಡಿರುತ್ತವೆ ಎಂದು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ದಿ ಹಿಂದು ಪತ್ರಿಕೆಯ ಮಂಗಳೂರು ಬ್ಯುರೋ ಮುಖ್ಯಸ್ಥರಾದ ರವಿಪ್ರಸಾದ್ ಕಮಿಲ,ಬೆಸೆಂಟ್ ಮಹಿಳಾ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ಸ್ಮಿತಾ ಶೆಣೈ ಮತ್ತು ಮಂಗಳೂರು ವಿವಿ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕಿ ಡಾ.ಸೌಮ್ಯ ಕೆ.ಬಿ.ಕಿಕ್ಕೇರಿ ನೇತೃತ್ವದ ಆಯ್ಕೆ ಸಮಿತಿಯು ಈ ಆಯ್ಕೆ ಮಾಡಿದೆ. ಜುಲೈ 22ರಂದು ಪತ್ರಿಕಾಭವನದಲ್ಲಿ ನಡೆಯಲಿರುವ ಪತ್ರಿಕಾ ದಿನಾಚರಣೆಯ ಸಂದರ್ಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ ಪ್ರಶಸ್ತಿ ಪ್ರದಾನ ಮಾಡಲಿರುವರು.

ಮೂಲತಃ ಉಡುಪಿ ಜಿಲ್ಲೆಯವರಾದ ಸಂದೀಪ್ ವಾಗ್ಲೆ ಕಳೆದ 17 ವರ್ಷಗಳಿಂದ ಪತ್ರಕರ್ತರಾಗಿದ್ದಾರೆ. ಪ್ರಸ್ತುತ ಕನ್ನಡಪ್ರಭದಲ್ಲಿ ಹಿರಿಯ ವರದಿಗಾರರಾಗಿರುವ ಅವರು ಬಿಎಸ್ಸಿ ಪದವಿ , ಪತ್ರಿಕೋದ್ಯಮದಲ್ಲಿ ಎಂ.ಎ. ಹಾಗೂ ಡಾಕ್ಟರೇಟ್ ಪದವಿಯನ್ನು ಮಂಗಳೂರು ವಿವಿಯಿಂದ ಪಡೆದಿದ್ದಾರೆ. ಈ ಹಿಂದೆ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರತಿಷ್ಠಿತ ಪ.ಗೋ. ಪ್ರಶಸ್ತಿಗೂ ಅವರು ಭಾಜನರಾಗಿದ್ದರು.

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಕನ್ನಡಪ್ರಭದ ಹಿರಿಯ ವರದಿಗಾರ ಡಾ.ಸಂದೀಪ್ ವಾಗ್ಲೆ ಅವರಿಗೆ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*