






ಬಂಟ್ವಾಳ: ಮಣಿಹಳ್ಳ ಸರಪಾಡಿ ರಸ್ತೆಯ ಪೆರಿಯಪಾದೆ ಎಂಬಲ್ಲಿ ಅಟೋರಿಕ್ಷಾವೊಂದು ಪಲ್ಟಿಯಾಗಿ ಓರ್ವ ಮೃತಪಟ್ಟು 7 ಮಂದಿ ಗಾಯಗೊಂಡ ಘಟನೆ ಬುಧವಾರ ಬೆಳಿಗ್ಗೆ ನಡೆದಿದೆ. ವಲೆಂಗೂರು ನಿವಾಸಿ ಫ್ರಾನ್ಸಿಸ್ ಸುವಾರಿಸ್ (85)ಮೃತಪಟ್ಟ ದುರ್ದೈವಿ. ಘಟನೆಯಲ್ಲಿ ಇಬ್ಬರು ಗಂಭೀರ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆ ಗೆ ದಾಖಲಾದರೆ , ಅಲ್ಪಸ್ವಲ್ಪ ಗಾಯಗೊಂಡ ಉಳಿದವರು ಬಂಟ್ವಾಳ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಟೋರಿಕ್ಷಾ ವೂ ಸರಪಾಡಿಯಿಂದ ಬಂಟ್ವಾಳ ಕಡೆಗೆ ಹಲವು ಮಂದಿ ಪ್ರಯಾಣಿಕರನ್ನು ಕೂರಿಸಿಕೊಂಡು ಬಂಟ್ವಾಳ ಕಡೆಗೆ ಆಗಮಿಸುವ ವೇಳೆ ಪರಿಯಪಾದೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
Be the first to comment on "ಪೆರಿಯಪಾದೆ ಎಂಬಲ್ಲಿ ಆಟೊರಿಕ್ಷಾ ಪಲ್ಟಿ: ಒಬ್ಬರು ಮೃತ್ಯುವಶ, ಏಳು ಮಂದಿಗೆ ಗಾಯ"