





ಬಂಟ್ವಾಳ: ಪೊಳಲಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ರಾಮಕೃಷ್ಣ ತಪೋವನ ಪೊಳಲಿ ವತಿಯಿಂದ ಪುಸ್ತಕ ವಿತರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೆಂಕಟೇಶ ನಾವುಡ ವಹಿಸಿದ್ದರು. ರಾಮಕೃಷ್ಣ ತಪೋವನದ ಶ್ರೀ ವಿವೇಕ ಚೈತನ್ಯಾನಂದ ಸ್ವಾಮೀಜಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಯಶವಂತ ಪೂಜಾರಿ ಉಪಸ್ಥಿತರಿದ್ದರು. ಶಾಲೆಯ ಮುಖ್ಯಸ್ಥರಾದ ರಾಧಾಕೃಷ್ಣ ಭಟ್ ಸ್ವಾಗತಿಸಿದರು.ವಸಂತಿ ವಂದನಾರ್ಪಣೆ ಮಾಡಿದರು. ಜಾನೆಟ್ ಲೋಬೊ ಕಾರ್ಯಕ್ರಮ ನಿರ್ವಹಿಸಿದರು.

Be the first to comment on "ಪೊಳಲಿ ಸರ್ಕಾರಿ ಪ್ರೌಢಶಾಲೆಯಲ್ಲಿ ಪುಸ್ತಕ ವಿತರಣೆ"