





ಬಂಟ್ವಾಳ: ಸೋಮವಾರ ಇಡೀ ದಿನ ಬಂಟ್ವಾಳ ತಾಲೂಕಿನ ವಿವಿಧ ಪ್ರಾಥಮಿಕ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಒಟ್ಟು 7,600 ಮಂದಿಗೆ ಕೋವಿಶೀಲ್ಡ್ ಲಸಿಕೆಗಳನ್ನು ವಿತರಿಸಲಾಗಿದೆ ಎಂದು ಬಂಟ್ವಾಳ ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಾ ಪ್ರಭು ತಿಳಿಸಿದ್ದಾರೆ. ಬೃಹತ್ ಮಟ್ಟದಲ್ಲಿ ತಾಲೂಕಿನಾದ್ಯಂತ ಸೋಮವಾರ ಲಸಿಕಾ ಅಭಿಯಾನ ತಾಲೂಕಿನ 21ಪ್ರಾಥಮಿಕ ಮತ್ತು ಸಮುದಾಯ ಆರೋಗ್ಯ ಕೇಂದ್ರ ಮತ್ತು 21 ಉಪಕೇಂದ್ರಗಳಲ್ಲಿ ಏಕಕಾಲದಲ್ಲಿ ನಡೆದಿದ್ದು, ಇವುಗಳಲ್ಲಿ ಎರಡನೇ ಡೋಸ್ 1,500ರಷ್ಟು ಕೋವಾಕ್ಸೀನ್ ಗಳನ್ನು ವಿತರಿಸಲು ಗುರಿ ನಿಗದಿಪಡಿಸಲಾಗಿದೆ. ಸುಮಾರು 100ಕ್ಕೂ ಅಧಿಕ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಈ ಅಭಿಯಾನದಲ್ಲಿ ಪಾಲ್ಗೊಂಡಿದ್ದರು ಎಂದವರು ತಿಳಿಸಿದರು.
Be the first to comment on "ಬಂಟ್ವಾಳ ತಾಲೂಕಿನಲ್ಲಿ 7600 ಕೋವಿಶೀಲ್ಡ್ ಲಸಿಕೆ ವಿತರಣೆ"