ಬಂಟ್ವಾಳ: ಸಚಿವರಾಗಿ ನೇಮಕಗೊಂಡ ಕೋಟ ಶ್ರೀನಿವಾಸ ಪೂಜಾರಿ ಅವರು ಶನಿವಾರ ಕಲ್ಲಡ್ಕಕ್ಕೆ ಆಗಮಿಸಿ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಹಿರಿಯ ಆರೆಸ್ಸೆಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ ಭಟ್ ಅವರ ಆಶೀರ್ವಾದ ಪಡೆದುಕೊಂಡರು. ಬಳಿಕ ಕೆಲ ಹೊತ್ತು ಅವರು ಮಾತುಕತೆ ನಡೆಸಿದರು. ಈ ಸಂದರ್ಭ ಡಾ. ಭಟ್ ಅವರು ಸಚಿವರನ್ನು ಅಭಿನಂದಿಸಿದರು.