ಬಂಟ್ವಾಳ: ಮಾಣಿ ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆ ನಡೆದಿದ್ದು, ಈ ಸಂದರ್ಭ ಮಾತನಾಡಿದ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೋವಿಡ್ ನಿರ್ವಹಣೆ ಕುರಿತು ಪಂಚಾಯಿತಿ ಕೈಗೊಂಡ ಕ್ರಮಗಳಿಗೆ ಮೆಚ್ಚುಗೆ ವ್ಯಕ್ತವಾಗಿದೆ ಎಂದರು.
ಜಿಲ್ಲೆಯಲ್ಲಿಯೇ ಗುರುತಿಸುವ ರೀತಿಯಲ್ಲಿ ಸಾವಿರದ ನೂರು ಡೋಸ್ ಗಳ ಕೋವಿಡ್ ಲಸಿಕಾ ಶಿಬಿರವನ್ನು ಗ್ರಾಮ ಪಂಚಾಯತ್ ವತಿಯಿಂದ ಬೆಂಗಳೂರಿನ ಪ್ರತಿಷ್ಠಿತ ಅಪೋಲೊ ಆಸ್ಪತ್ರೆಯ ಸಹಕಾರದೊಂದಿಗೆ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ನಡೆಸಲಾಗಿದೆ ಎಂದರು. ತೆರಿಗೆ ಸಂಗ್ರಹ ವಿಚಾರದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸದಸ್ಯರುಗಳಾದ ಸುದೀಪ್ ಶೆಟ್ಟಿ, ಮೆಲ್ವಿನ್ ಕಿಶೋರ್ ಮಾರ್ಟಿಸ್, ಇಬ್ರಾಹಿಂ.ಕೆ.ಮಾಣಿ ಹೇಳಿದರು. ಈ ಸಂದರ್ಭ ತೆರಿಗೆ ಪಾವತಿಸದಿರುವವರಿಗೆ ನೋಟಿಸ್ ನೀಡಲು ಸೂಚಿಸಲಾಯಿತು. ಸ್ವಾತಂತ್ರ್ಯೋತ್ಸವ ದಿನದಂದು ನೀರಿನ ಶುಲ್ಕ ಸಂಗ್ರಹಕ್ಕೆ ತಂತ್ರಾಂಶವನ್ನು ಜಾರಿಗೊಳಿಸಲಾಗುವುದು. ಆ ಮೂಲಕ ನೂರು ಶೇಕಡ ತೆರಿಗೆ ಸಂಗ್ರಹದ ಗುರಿ ಹೊಂದಲಾಗಿದೆ ಎಂದು ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಹೇಳಿದರು. ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪ್ರೀತಿ ಡಿನ್ನಾ ಪಿರೇರಾ, ಸದಸ್ಯರುಗಳಾದ ನಾರಾಯಣ ಶೆಟ್ಟಿ ತೋಟ, ರಮಣಿ.ಡಿ.ಪೂಜಾರಿ, ಸೀತಾ, ಸುಜಾತ ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾರಾಯಣ ಗಟ್ಟಿ ಇಲಾಖೆ ಮತ್ತು ಸಾರ್ವಜನಿಕ ಅರ್ಜಿಗಳನ್ನು ಸಭೆಯಲ್ಲಿ ಮಂಡಿಸಿದರು.
Be the first to comment on "ಮಾಣಿ ಗ್ರಾಮಸಭೆ: ಕೋವಿಡ್ ನಿರ್ವಹಣೆಗೆ ಮೆಚ್ಚುಗೆ ದೊರಕಿದೆ – ಅಧ್ಯಕ್ಷ ಬಾಲಕೃಷ್ಣ ಆಳ್ವ"