




ಬಂಟ್ವಾಳ: ಬಿಜೆಪಿ ಬಂಟ್ವಾಳ ಕ್ಷೇತ್ರ ಮಹಿಳಾ ಮೋರ್ಚಾ ವತಿಯಿಂದ ಅಮ್ಟೂರು ಗ್ರಾಮದಲ್ಲಿ ರಾಷ್ಟ್ರೀಯ ಕೈಮಗ್ಗ ದಿನಾಚರಣೆಯ ಅಂಗವಾಗಿ ಅಮ್ಟೂರು ಗ್ರಾಮದಲ್ಲಿ ಕಾರ್ಯಕ್ರಮ ನಡೆಯಿತು.
ಈ ಸಂದರ್ಭ ಪಕ್ಷದ ಹಿರಿಯ ನಾಯಕಿ ವಿಶಾಲಾ ಡಿ. ಶೆಟ್ಟಿ ಬಾಳಿಕೆ ಅವರನ್ನು ಮಹಿಳಾ ಮೋರ್ಚಾ ಅಧ್ಯಕ್ಷೆ ಭಾರತಿ ಎಸ್. ಚೌಟ, ಪ್ರಧಾನ ಕಾರ್ಯದರ್ಶಿಗಳಾದ ಸೀಮಾ ಮಾಧವ, ಲಖಿತಾ ಆರ್ ಶೆಟ್ಟಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಕಮಲಾಕ್ಷಿ ಪೂಜಾರಿ, ಬಾಳ್ತಿಲ ಪಂಚಾಯತ್ ಅಧ್ಯಕ್ಷರಾದ ಹಿರಣ್ಮಯಿ, ಗೋಳ್ತಮಜಲು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಲಕ್ಷ್ಮಿ ಪ್ರಭು ಸನ್ಮಾನಿಸಿದರು
ಮಹಿಳಾ ಮೋರ್ಚಾದ ಕೋಶಾಧಿಕಾರಿ ಲತಾ, ಕಾರ್ಯದರ್ಶಿಯಾದ ಸುಚಿತ್ರ, ಪಂಚಾಯತ್ ಸದಸ್ಯರುಗಳಾದ ಪವಿತ್ರ, ಪ್ರೇಮ, ಸುಷ್ಮಾ, ಮಮತಾ, ಲೀಲಾವತಿ, ಪ್ರಮೀಳಾ, ಇಂದಿರಾ ಆರ್ ರೈ, ಬೂತ್ ಅಧ್ಯಕ್ಷರಾದ ಪ್ರಭಾಕರ ಶೆಟ್ಟಿ ಬೈದರಡ್ಕ, ಗ್ರಾಮ ಪಂಚಾಯತ್ ಸದಸ್ಯರಾದ ಗೋಪಾಲಕೃಷ್ಣ ಪೂವಳ, ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ರಾಜ್ಯ ಎಸ್ ಸಿ ಮೋರ್ಚಾ ಕಾರ್ಯಕಾರಿಣಿ ಸದಸ್ಯರಾದ ದಿನೇಶ್ ಅಮ್ಟೂರು ಹಾಗೂ ಹಿಂದೂ ಜಾಗರಣ ವೇದಿಕೆ ಜಿಲ್ಲಾ ಪ್ರಮುಖರಾದ ರತ್ನಾಕರ ಶೆಟ್ಟಿ ಕಲ್ಲಡ್ಕ ಉಪಸ್ಥಿತರಿದ್ದರು.

Be the first to comment on "ರಾಷ್ಟ್ರೀಯ ಕೈಮಗ್ಗ ದಿನಾಚರಣೆ: ಅಮ್ಟೂರು ಗ್ರಾಮದಲ್ಲಿ ಕಾರ್ಯಕ್ರಮ"