ವಿಟ್ಲ

ಯಾರಿಗೂ ನೋವುಂಟುಮಾಡದ ಬದುಕೇ ನಿಜ ಅರ್ಥದ ಸಂಸ್ಕಾರದ ಬದುಕು – ಮಾಣಿಲ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ

ಶ್ರೀಧಾಮ ಮಾಣಿಲದಲ್ಲಿ ಶ್ರೀ ವರಮಹಾಲಕ್ಷ್ಮೀ ವ್ರತಾಚರಣೆ ಹಿನ್ನೆಲೆಯಲ್ಲಿ 48 ದಿನಗಳ ಕಾಲ ಸಾಮೂಹಿಕ ಶ್ರೀಲಕ್ಷ್ಮೀಪೂಜೆ

ಮಾಣಿಲ: ಯಾವುದೇ ಜೀವಿಗಳಿಗೂ ನೋವುಂಟುಮಾಡದ ಬದುಕು ನಿಜ ಅರ್ಥದ ಸಂಸ್ಕಾರದ ಬದುಕು ಎಂದು ಶ್ರೀಧಾಮ ಮಾಣಿಲ ಶ್ರೀ ಮಹಾಲಕ್ಷ್ಮೀ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಹೇಳಿದರು.

ಜಾಹೀರಾತು

ಶ್ರೀ ಧಾಮ ಮಾಣಿಲ ಶ್ರೀ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ಶ್ರೀ ವರಮಹಾಲಕ್ಷ್ಮೀ ವ್ರತಾಚರಣೆ ಪ್ರಯುಕ್ತ 48 ದಿನಗಳವರೆಗೆ ನಡೆಯಲಿರುವ ಸಾಮೂಹಿಕ ಶ್ರೀಲಕ್ಷ್ಮೀಪೂಜೆಯ 36ನೇ ದಿನದ ಬಾಲಭೋಜನ ಕಾರ್ಯಕ್ರಮದಲ್ಲಿ ಆಶೀರ್ವಚನ‌ ನೀಡಿದರು.

ಕ್ಷೇತ್ರದ ಟ್ರಸ್ಟಿ ಮಂಜು ವಿಟ್ಲ ಮಾತನಾಡಿ ಮಕ್ಕಳಿಗೆ ಸಂಸ್ಕಾರ ಕಲಿಸುವ ಕೆಲಸ ಶ್ರೀಧಾಮದಿಂದ ಸದಾ ನಡೆಯುತ್ತಿದೆ ಎಂದು ಮಾಹಿತಿ ನೀಡಿದರು. ನಮ್ಮ ಕುಡ್ಲ ಹಾಗೂ ದೈಜಿ ವರ್ಲ್ಡ್ ವರದಿಗಾರ ಕಿಶೋರ್ ಪೆರಾಜೆ, ಸುಬ್ರಹ್ಮಣ್ಯ ಸದಾನಂದ ಆಸ್ಪತ್ರೆ ವೈದ್ಯ ಡಾ. ಚರಣ್ ಶೆಟ್ಟಿ, ಅವರ ಪತ್ನಿ ಸ್ವಾತಿ ಚರಣ್ ಶೆಟ್ಟಿ, ಕ್ಷೇತ್ರದ ಮಹಿಳಾ ಸಮಿತಿ ಅಧ್ಯಕ್ಷೆ ವನಿತಾ ವಿ.ಶೆಟ್ಟಿ ಉಪಸ್ಥಿತರಿದ್ದರು.ಶ್ರೀ ಧಾಮ ಮಿತ್ರವೃಂದದ ಪದಾಧಿಕಾರಿ ಪೃಥ್ವೀರಾಜ್ ಸ್ವಾಗತಿಸಿದರು. ದೀಕ್ಷಾ ಕಾಪಿಕ್ಕಾಡು ಕಾರ್ಯಕ್ರಮ ನಿರೂಪಿಸಿದರು. ವಸಂತಿ ಯಶೋಧರ ವಂದಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ