ಬಂಟ್ವಾಳ: ಬಂಟ್ವಾಳದ ಎಸ್.ವಿ.ಎಸ್. ದೇವಳ ಆಂಗ್ಲ ಮಾಧ್ಯಮ ಶಾಲೆಯ ಏಳು ಮಂದಿ ಈ ಬಾರಿಯ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 600ಕ್ಕೂ ಅಧಿಕ ಅಂಕ ಗಳಿಸಿ ಗಮನ ಸೆಳೆದಿದ್ದಾರೆ. ಇವರ ಪೈಕಿ, ಎನ್. ಪ್ರತೀಕ್ ಮಲ್ಯ 625ರಲ್ಲಿ 625 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ವಿದ್ಯಾರ್ಥಿಗಳ ಸಾಲಿಗೆ ಸೇರಿದ್ದರೆ, ವರ್ಷಿತ್ ಎಚ್ 623, ವೈಷ್ಣವಿ ರಾವ್ 621, ತೇಜಸ್ವಿ 619, ಸುಜನ್ ಕುಮಾರ್ ಶೆಟ್ಟಿ 611, ನಿಶಾಂತ್ ಎಂ. 611, ಗೌತಮಿ 607 ಅಂಕಗಳನ್ನು ಗಳಿಸಿದ್ದಾರೆ. ಇವರನ್ನು ಶಾಲೆಯಲ್ಲಿ ಶಿಕ್ಷಕ, ಶಿಕ್ಷಕೇತರ ವೃಂದದವರಿಂದ ಅಭಿನಂದಿಸುವ ಕಾರ್ಯವನ್ನು ಮಂಗಳವಾರ ಬೆಳಗ್ಗೆ ಮಾಡಿತು. ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಸರ ಬಿ.ಪುರುಷೋತ್ತಮ ಶೆಣೈ, ಟ್ರಸ್ಟಿ ಹಾಗೂ ಶಾಲಾ ಕರೆಸ್ಪಾಂಡೆಂಟ್ ಬಿ.ಪ್ರವೀಣ್ ಕಿಣಿ, ಶಾಲಾ ಆಡಳಿತ ಮಂಡಳಿಯ ಸದಸ್ಯೆರಾದ ಬಿ.ರಿತೇಶ್ ಬಾಳಿಗಾ, ಕೆ.ಸದಾಶಿವ ಪ್ರಭು, ಮುಖ್ಯೋಪಾಧ್ಯಾಯಿನಿ ರೋಶನಿ ತಾರಾ ಡಿಸೋಜ, ಶಾಲೆಯ ಅಧ್ಯಾಪಕರು, ಸಿಬ್ಬಂದಿ ಈ ಸಂದರ್ಭ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕಾಗಿ ಶುಭ ಹಾರೈಸಿದರು.
ಬಂಟ್ವಾಳ ಎಸ್.ವಿ.ಎಸ್.ದೇವಳ ಆಂಗ್ಲ ಮಾಧ್ಯಮ ಶಾಲೆಯ ಏಳು ವಿದ್ಯಾರ್ಥಿಗಳಿಗೆ 600ಕ್ಕೂ ಅಧಿಕ ಅಂಕ, ಶಾಲೆಯಲ್ಲಿ ಅಭಿನಂದನಾ ಸಮಾರಂಭ
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಂಟ್ವಾಳ ಎಸ್.ವಿ.ಎಸ್.ದೇವಳ ಆಂಗ್ಲ ಮಾಧ್ಯಮ ಶಾಲೆಯ ಏಳು ವಿದ್ಯಾರ್ಥಿಗಳಿಗೆ 600ಕ್ಕೂ ಅಧಿಕ ಅಂಕ, ಶಾಲೆಯಲ್ಲಿ ಅಭಿನಂದನಾ ಸಮಾರಂಭ"