ಬಂಟ್ವಾಳ: ಮಾಣಿ ಗ್ರಾಮ ಪಂಚಾಯಿತಿಯಲ್ಲಿ ಶುಲ್ಕ ಸಂಗ್ರಹಕ್ಕೆ ನೂತನ ತಂತ್ರಾಂಶವನ್ನು ಸ್ವಾತಂತ್ರ್ಯೋತ್ಸವದ ಸಂಭ್ರಮದ ಸಂದರ್ಭ ಗ್ರಾಪಂ ವಠಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಧ್ಯಕ್ಷ ಬಾಲಕೃಷ್ಣ ಆಳ್ವ ಬಿಡುಗಡೆಗೊಳಿಸಿದರು.
ಮುಂದಿನ ದಿನಗಳಲ್ಲಿ ಗ್ರಾಮ ಪಂಚಾಯತ್ ಸಂಪೂರ್ಣ ಡಿಜಿಟಲೀಕರಣಗೊಳಿಸಲು ಪ್ರಯತ್ನಿಸಲಾಗುವುದು ಎಂದು ಅಧ್ಯಕ್ಷರು ಈ ಸಂದರ್ಭ ಹೇಳಿದರು. ಮಾಣಿ ಶ್ರೀ ಉಳ್ಳಾಲ್ತಿ ದೈವಸ್ಥಾನದ ಆಡಳಿತ ಮೊಕ್ತೇಸರರಾದ ಮಾಣಿಗುತ್ತು ಸಚಿನ್ ರೈ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಮಾಣಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪ್ರೀತಿ ಡಿನ್ನಾ ಪಿರೇರಾ, ಸದಸ್ಯರುಗಳಾದ ಇಬ್ರಾಹಿಂ.ಕೆ.ಮಾಣಿ, ಮೆಲ್ವಿನ್ ಕಿಶೋರ್, ನಾರಾಯಣ ಶೆಟ್ಟಿ, ರಮಣಿ.ಡಿ.ಪೂಜಾರಿ, ಸೀತಾ, ಸುಜಾತಾ, ಮಿತ್ರಾಕ್ಷಿ, ಸಮೂಹ ಸಂಪನ್ಮೂಲ ವ್ಯಕ್ತಿ ಸತೀಶ್ ರಾವ್, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾರಾಯಣ ಗಟ್ಟಿ ಸ್ವಾಗತಿಸಿದರು. ಪಂಚಾಯತ್ ಸಿಬ್ಬಂದಿ ಸಹಕರಿಸಿದರು.
Be the first to comment on "ಮಾಣಿ ಗ್ರಾಪಂನಲ್ಲಿ ಶುಲ್ಕ ಸಂಗ್ರಹಕ್ಕೆ ನೂತನ ತಂತ್ರಾಂಶ ಬಿಡುಗಡೆ"