ಮಾಣಿ ಗ್ರಾಪಂನಲ್ಲಿ ಶುಲ್ಕ ಸಂಗ್ರಹಕ್ಕೆ ನೂತನ ತಂತ್ರಾಂಶ ಬಿಡುಗಡೆ

ಬಂಟ್ವಾಳ: ಮಾಣಿ ಗ್ರಾಮ ಪಂಚಾಯಿತಿಯಲ್ಲಿ ಶುಲ್ಕ ಸಂಗ್ರಹಕ್ಕೆ ನೂತನ ತಂತ್ರಾಂಶವನ್ನು ಸ್ವಾತಂತ್ರ್ಯೋತ್ಸವದ ಸಂಭ್ರಮದ ಸಂದರ್ಭ ಗ್ರಾಪಂ ವಠಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಧ್ಯಕ್ಷ ಬಾಲಕೃಷ್ಣ ಆಳ್ವ ಬಿಡುಗಡೆಗೊಳಿಸಿದರು.

ಮುಂದಿನ ದಿನಗಳಲ್ಲಿ ಗ್ರಾಮ ಪಂಚಾಯತ್ ಸಂಪೂರ್ಣ ಡಿಜಿಟಲೀಕರಣಗೊಳಿಸಲು ಪ್ರಯತ್ನಿಸಲಾಗುವುದು ಎಂದು ಅಧ್ಯಕ್ಷರು ಈ ಸಂದರ್ಭ ಹೇಳಿದರುಮಾಣಿ ಶ್ರೀ ಉಳ್ಳಾಲ್ತಿ  ದೈವಸ್ಥಾನದ ಆಡಳಿತ ಮೊಕ್ತೇಸರರಾದ ಮಾಣಿಗುತ್ತು ಸಚಿನ್ ರೈ  ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಮಾಣಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪ್ರೀತಿ ಡಿನ್ನಾ ಪಿರೇರಾ, ಸದಸ್ಯರುಗಳಾದ ಇಬ್ರಾಹಿಂ.ಕೆ.ಮಾಣಿ, ಮೆಲ್ವಿನ್ ಕಿಶೋರ್, ನಾರಾಯಣ ಶೆಟ್ಟಿ, ರಮಣಿ.ಡಿ.ಪೂಜಾರಿ, ಸೀತಾ, ಸುಜಾತಾ, ಮಿತ್ರಾಕ್ಷಿ, ಸಮೂಹ ಸಂಪನ್ಮೂಲ ವ್ಯಕ್ತಿ ಸತೀಶ್ ರಾವ್, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾರಾಯಣ ಗಟ್ಟಿ ಸ್ವಾಗತಿಸಿದರು. ಪಂಚಾಯತ್ ಸಿಬ್ಬಂದಿ ಸಹಕರಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಮಾಣಿ ಗ್ರಾಪಂನಲ್ಲಿ ಶುಲ್ಕ ಸಂಗ್ರಹಕ್ಕೆ ನೂತನ ತಂತ್ರಾಂಶ ಬಿಡುಗಡೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*