ಬಂಟ್ವಾಳ: ದ.ಕ ಜಿಲ್ಲಾ ಗ್ಯಾರೇಜ್ ಮಾಲಕರ ಸಂಘ ಬಂಟ್ವಾಳ ವಲಯ, ಕಾರ್ಮಿಕ ಇಲಾಖೆ ಬೆಂಗಳೂರು ಹಾಗೂ ದ.ಕ. ಜಿಲ್ಲಾ ಸಾಮಾಜಿಕ ಭದ್ರತಾ ಮಂಡಳಿ ಇದರ ಸಹಯೋಗದೊಂದಿಗೆ ಮೆಕಾನಿಕ್ ವೃತ್ತಿ ಬಾಂದವರಿಗೆ ಆಹಾರ ಧಾನ್ಯಗಳ ಕಿಟ್ ವಿತರಣೆ ಕಾರ್ಯಕ್ರಮ ಬಿ.ಸಿ. ರೋಡಿನ ಕನ್ನಡ ಭವನದಲ್ಲಿ ನಡೆಯಿತು.
ಶಾಸಕ ರಾಜೇಶ್ ನಾಯ್ಕ್ ಕಾರ್ಯಕ್ರಮ ಉದ್ಘಾಟಿಸಿದರು.ಕಾರ್ಮಿಕ ಅಧಿಕಾರಿ ಅಮರೇಂದ್ರ ಇಲಾಖೆಯಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದರು. ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ, ಕಾರ್ಮಿಕ ನಿರೀಕ್ಷಕಿ ಮರ್ಲಿನ್ ಗ್ರೇಸಿಯಾ ಡಿಸೋಜ , ಗ್ಯಾರೇಜು ಮಾಲಕರ ಸಂಘದ ಜಿಲ್ಲಾಧ್ಯಕ್ಷ ದಿನೇಶ್ ಕುಮಾರ್, ಸಂಘದ ಅಧ್ಯಕ್ಷ ಅಣ್ಣು ಪೂಜಾರಿ, ತಾ.ಪಂ ಮಾಜಿ ಸದಸ್ಯ ಗಣೇಶ್ ಸುವರ್ಣ ಉಪಸ್ಥಿತರಿದ್ದರು. ಸದಸ್ಯ ಸುಧಾಕರ ಸಾಲ್ಯಾನ್ ಕಾರ್ಯಕ್ರಮ ನಿರೂಪಿಸಿದರು. ಪ್ರಶಾಂತ್ ಭಂಡಾರ್ಕಾರ್ ವಂದಿಸಿದರು.
Be the first to comment on "ಗ್ಯಾರೇಜ್ ಮಾಲೀಕರ ಸಂಘ, ಕಾರ್ಮಿಕ ಇಲಾಖೆ, ಜಿಲ್ಲಾ ಸಾಮಾಜಿಕ ಭದ್ರತಾ ಮಂಡಳಿ ಸಹಯೋಗದೊಂದಿಗೆ ಆಹಾರ ಧಾನ್ಯಗಳ ಕಿಟ್ ವಿತರಣೆ"