ಜಿಲ್ಲಾ ಸುದ್ದಿ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ಆ.30ರ ತನಕ ಯಾವುದೇ ಸೇವೆಗಳಿಗೆ ಅವಕಾಶವಿಲ್ಲ

ಸುಬ್ರಹ್ಮಣ್ಯ: ಕೇರಳ ರಾಜ್ಯಕ್ಕೆ ಹೊಂದಿಕೊಂಡಿರುವ ಗಡಿ ಜಿಲ್ಲೆಯಾದ ದ.ಕದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಜಿಲ್ಲಾಧಿಕಾರಿಗಳ ಆದೇಶದಂತೆ ರಾಜ್ಯದ ನಂಬರ್ ವನ್ ಆದಾಯದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆ.30 ರ ತನಕ ಯಾವುದೇ ಸೇವೆಗಳು ನಡೆಯುವುದಿಲ್ಲ. ಕೇವಲ ಶ್ರೀ ದೇವರ ದರುಶನಕ್ಕೆ ಮಾತ್ರ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ. ಅಲ್ಲದೆ ತೀರ್ಥಪ್ರಸಾದ ವಿತರಣೆ, ಅನ್ನಸಂತರ್ಪಣೆ ಇರುವುದಿಲ್ಲ. ಶನಿವಾರ ಮತ್ತು ಆದಿತ್ಯವಾರ ವಾರಾಂತ್ಯದ ದಿನಗಳಲ್ಲಿ ಶ್ರೀ ದೇವರ ದರುಶನಕ್ಕೆ ಕೂಡಾ ಅವಕಾಶ ನಿರ್ಬಂಧಿಸಲಾಗಿದೆ ಎಂದು ಶ್ರೀ ದೇವಳದ ಪ್ರಕಟಣೆ ತಿಳಿಸಿದೆ.

ದ.ಕ ಜಿಲ್ಲೆಯಲ್ಲಿ ಪ್ರಸ್ತುತ ಕೋವಿಡ್-10 ಪ್ರಕರಣಗಳು ಅಧಿಕವಾಗಿರುವುದರಿಂದ ಭಕ್ತರ ಆರೋಗ್ಯ ಹಿತದೃಷ್ಠಿಯಿಂದ ಜಿಲ್ಲಾಧಿಕಾರಿಗಳ ಆದೇಶದಂತೆ ರಾಜ್ಯದ ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆಯಲ್ಲಿ ಆ.30ರ ಸರ್ಪಸಂಸ್ಕಾರ, ಆಶ್ಲೇಷ ಬಲಿ, ನಾಗಪ್ರತಿಷ್ಠೆ, ತುಲಾಭಾರ, ಚವಲ, ಪಂಚಾಮೃತ ಮಹಾಭಿಷೇಕ, ಪ್ರಾರ್ಥನೆ ಸೇರಿದಂತೆ ಯಾವುದೇ ಸೇವೆಗಳು ನಡೆಯುವುದಿಲ್ಲ. ಬೆಳಗ್ಗೆ ೭.೦೦ರಿಂದ ಮಧ್ಯಾಹ್ನ ೧೧.೩೦ ತನಕ, ಮಧ್ಯಾಹ್ನ ೧೨.೧೫-೧.೩೦ ಹಾಗೂ ೨.೩೦ರಿಂದ ರಿಂದ ಸಂಜೆ ೭.೦೦ ತನಕ ಭಕ್ತರು ಶ್ರೀ ದೇವರ ದರುಶನ ಮಾಡಬಹುದು. ಅಲ್ಲದೆ ಈ ಸಂದರ್ಭ ಮಂಗಳಾರತಿ ಸೇವೆ ಸಲ್ಲಿಸಲು ಮಾತ್ರ ಅವಕಾಶ ಕಲ್ಪಿಸಲಾಗಿದೆ. ವಾರಾಂತ್ಯ ದಿನಗಳನ್ನು ಹೊರತು ಪಡಿಸಿ ಇತರ ದಿನಗಳಲ್ಲಿ ವಸತಿ ಗೃಹದಲ್ಲಿ ತಂಗಲು ಅವಕಾಶವಿದೆ.ತಂಗುವ ಭಕ್ತರು 72 ಗಂಟೆಯೊಳಗೆ ಆರ್‌ಟಿಪಿಸಿಆರ್ ಪರೀಕ್ಷೆ ಮಾಡಿಸಿ ನೆಗೆಟಿವ್ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಹಾಜರುಪಡಿಸಬೇಕು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ