ಬಂಟ್ವಾಳ

ಬಿ.ಸಿ.ರೋಡಿನಲ್ಲಿ ಸೌತ್ ಕೆನರಾ ಫೊಟೋಗ್ರಾಫರ್ಸ್ ಅಸೋಸಿಯೇಶನ್ ನಿಂದ ವಿಶ್ವ ಛಾಯಾಗ್ರಹಣ ದಿನಾಚರಣೆ

ಬಂಟ್ವಾಳ: ಬಂಟ್ವಾಳ ವಲಯ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ನಿಂದ ಬಿ.ಸಿ.ರೋಡಿನ ಪ್ರೀತಿ ಕಾಂಪ್ಲೆಕ್ಸ್ ನಲ್ಲಿ  182ನೇ ವಿಶ್ವ ಛಾಯಾಗ್ರಹಣ ದಿನಾಚರಣೆಯನ್ನು ವಲಯಾಧ್ಯಕ್ಷ  ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಹಿರಿಯ ಸದಸ್ಯ ಛಾಯಾಗ್ರಾಹಕ ವಿಟ್ಲದ ಶೆಟ್ಟಿ ಸ್ಟುಡಿಯೋದ ಜನಾರ್ದನ ಶೆಟ್ಟಿ ದಂಪತಿಯನ್ನು ಸನ್ಮಾನಿಸಲಾಯಿತು. ಜಿಲ್ಲಾ ಕೋಶಾಧಿಕಾರಿ ಆನಂದ್ ಎನ್. ಪ್ರಾಸ್ತಾವಿಕವಾಗಿ ಮಾತನಾಡಿದರು. ವಲಯ ಕೋಶಾಧಿಕಾರಿ ವಿಕ್ರಂ ಸ್ವಾಗತಿಸಿದರು. ವಲಯ ಪ್ರಧಾನ ಕಾರ್ಯದರ್ಶಿ ವಿಕೇಶ್ ವಂದಿಸಿದರು. ಎಸ್.ಕೆ.ಪಿ.ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕರಾದ ಹರೀಶ್ ರಾವ್, ಮಾಜಿ ವಲಯಾಧ್ಯಕ್ಷ ಸತೀಶ್ ಕುಮಾರ್, ದಯಾನಂದ್ ಬಂಟ್ವಾಳ್, ಹರೀಶ್ ಮಾಣಿ, ವಲಯ ಉಪಾಧ್ಯಕ್ಷ ಹರೀಶ್ ನಾಟಿ, ಕಿಶೋರ್, ರೋಶನ್, ಜನಾರ್ಧನ ಶೆಟ್ಟಿ ಪುತ್ರವಲಯ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ