ಬಿ.ಸಿ.ರೋಡಿನಲ್ಲಿ ಬಿಜೆಪಿ ಬಂಟ್ವಾಳ ಕ್ಷೇತ್ರ ಕಾರ್ಯನಿರ್ವಹಣಾ ತಂಡದ ಸಭೆ
ಬಂಟ್ವಾಳ: ಬಿಜೆಪಿ ಬಂಟ್ವಾಳ ಕ್ಷೇತ್ರ ಕಾರ್ಯನಿರ್ವಹಣಾ ತಂಡದ ಸಭೆ ಬಿ.ಸಿ.ರೋಡಿನಲ್ಲಿ ಶನಿವಾರ ನಡೆಯಿತು. ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಉದ್ಘಾಟಿಸಿ ಮಾತನಾಡಿ, ಬಂಟ್ವಾಳ ಕ್ಷೇತ್ರದಲ್ಲಿ ಆರಂಭವಾಗಿರುವ ಐಸಿಯು ಸಾರಿಗೆ ಆರೋಗ್ಯ ಸುರಕ್ಷಾ ಬಸ್ ಜನಸಾಮಾನ್ಯರ ಮನೆ ಬಾಗಿಲಿಗೆ ಆರೋಗ್ಯ ಸೇವೆ ನೀಡುವ ರಾಜ್ಯದಲ್ಲೇ ಉತ್ತಮ ಮತ್ತು ಪ್ರಥಮ ಸೌಲಭ್ಯವಾಗಿದೆ ಎಂದರು.
ಸಮಾರೋಪ ಭಾಷಣವನ್ನು ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿ ಮಾಡಿದರು. ಈ ಸಂದರ್ಭ ನೂತನ ಮಹಾಶಕ್ತಿ ಕೇಂದ್ರಗಳಿಗೆ ಅಧ್ಯಕ್ಷ, ಕಾರ್ಯದರ್ಶಿಗಳ ಘೋಷಣೆ ಮಾಡಲಾಯಿತು. ನರಿಕೊಂಬು ಮಹಾ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಯಶೋಧರ ಕರ್ಬೆಟ್ಟು, ಪ್ರಧಾನ ಕಾರ್ಯದರ್ಶಿಯಾಗಿ ಅಭಿಷೇಕ್ ಶೆಟ್ಟಿ, ಬಾಳ್ತಿಲ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಮೋಹನ್ ಪಿ. ಎಸ್. ಪ್ರಧಾನ ಕಾರ್ಯದರ್ಶಿಯಾಗಿ ಅಶ್ವತ್ಥ್ ಬರಿಮಾರ್, ವಿಟ್ಲಪಡ್ನೂರು ಮಹಾ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಸನತ್ ಕುಮಾರ್ ರೈ, ಪ್ರಧಾನ ಕಾರ್ಯದರ್ಶಿಯಾಗಿ ಅರವಿಂದ ರೈ, ಅಮ್ಟಾಡಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಚಂದ್ರಾವತಿ ಪೊಳಲಿ, ಪ್ರಧಾನ ಕಾರ್ಯದರ್ಶಿಯಾಗಿ ಪ್ರಕಾಶ್ ಬೆಳ್ಳೂರು, ಕಾವಳಪಡೂರು ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾಗಿ ರಮನಾಥ ರಾಯಿ, ಪ್ರಧಾನ ಕಾರ್ಯದರ್ಶಿಯಾಗಿ ಪ್ರಭಾಕರ ಪ್ರಭು ನೇಮಕಗೊಂಡರು.
ಜಿಲ್ಲಾ ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಸುಧೀರ್ ಕಣ್ಣೂರು, ರಾಮ್ ದಾಸ್ ಬಂಟ್ವಾಳ, ಉಪಾಧ್ಯಕ್ಷರಾದ ಕೊರಗಪ್ಪ ನಾಯ್ಕ್, ಹರಿಕೃಷ್ಣ ಬಂಟ್ವಾಳ, ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ, ಪಕ್ಷ ಪ್ರಮುಖರಾದ ಸುಲೋಚನಾ ಜಿ.ಕೆ. ಭಟ್ ಉಪಸ್ಥಿತರಿದ್ದರು ಕ್ಷೇತ್ರದ ಪ್ರಧಾನ ಕಾರ್ಯದರ್ಶಿಗಳಾದ ರವೀಶ್ ಶೆಟ್ಟಿ ಕರ್ಕಳ ಸ್ವಾಗತಿಸಿದರು. ಕಾರ್ಯಕ್ರಮವನ್ನು ಡೊಂಬಯ ಅರಳ ಕಾರ್ಯಕ್ರಮ ನಿರ್ವಹಿಸಿದರು .
Be the first to comment on "ರಾಜ್ಯದಲ್ಲೇ ಮೊದಲ ಪ್ರಯೋಗವಾದ ಐಸಿಯು ಆರೋಗ್ಯ ಸುರಕ್ಷಾ ಬಸ್ ಗೆ ಉತ್ತಮ ಪ್ರತಿಕ್ರಿಯೆ – ಶಾಸಕ ರಾಜೇಶ್ ನಾಯ್ಕ್"