ಬಂಟ್ವಾಳ: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಜೈ ತುಲುನಾಡ್ (ರಿ.) ಮತ್ತು ತುಲುನಾಡ ಯುವಸೇನೆ ಬಂಟ್ವಾಳ ಸಹಭಾಗಿತ್ವದಲ್ಲಿ ಬಲೆ ತುಲು ಲಿಪಿ ಕಲ್ಪುಗ ಕಾರ್ಯಗಾರದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಜೈ ತುಲುನಾಡ್ (ರಿ) ಅಧ್ಯಕ್ಷ ಸುದರ್ಶನ್ ಸುರತ್ಕಲ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಗಾರವನ್ನು ಚೇತನ್ ಮುಂಡಾಜೆ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.
ಶಿಕ್ಷಕರಾದ ಜಗದೀಶ ಗೌಡ ಕಲ್ಕಳ ಲಿಪಿ ಬರೆಯುವ ಮೂಲಕ ಕಾರ್ಯಾಗಾರಕ್ಕೆ ಚಾಲನೆ ನೀಡಿದರು.ತುಳುವಿಗೆ ಸುಮಾರು 2500 ವರ್ಷಗಳ ಇತಿಹಾಸ ಇದೆ, ಇಂತಹ ಭಾಷೆಯನ್ನು ನಾವು ಕಲಿಯದೆ ಹಿಂದುಳಿಯುವಂತೆ ಮಾಡಿದ್ದೇವೆ ಎಂದು ಈ ಸಂದರ್ಭ ಚೇತನ್ ಮುಂಡಾಜೆ ಹೇಳಿದರು.
ಜೈ ತುಲುನಾಡ್ (ರಿ) ಸಂಘಟನೆಯ ಅಧ್ಯಕ್ಷ ಸುದರ್ಶನ್ ಸುರತ್ಕಲ್ ಮಾತನಾಡಿ, ಸಂಘಟನೆ ಸಾಮಾಜಿಕ ಜಾಲತಾಣದಲ್ಲಿ ಕೆಲಸ ಮಾಡುವ ಕಾಲದಿಂದ ಇಂದಿನ ತನಕವೂ ತುಲುವಿಗೆ ಸ್ಥಾನಮಾನಕ್ಕಾಗಿ ಶಕ್ತಿಮೀರಿ ಪ್ರಯತ್ನ ಮಾಡುತ್ತಿದ್ದೇವೆ. ಅಕಾಡೆಮಿಯೊಟ್ಟಿಗೆ ಸಂಘಟನೆಯು ಸಹಕಾರ ನೀಡುತ್ತಾ ಬರುತ್ತಿದೆ. ತುಲುನಾಡಿನ ಎಲ್ಲಾ ಅಂಗಡಿ, ಶಾಲೆ, ಕಚೇರಿಯಲ್ಲಿ ತುಲು ಲಿಪಿಯ ನಾಮಫಲಕ ಹಾಕಬೇಕು ಎಂದರು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಸೀತಾರಾಮ ಸಜಿಪ, ಜೈ ತುಲುನಾಡ್ (ರಿ) ಉಪಾಧ್ಯಕ್ಷರಾದ ಉದಯ್ ಪೂಂಜ, ಉಪ ಸಂಘಟನಾ ಕಾರ್ಯದರ್ಶಿ ಅಶ್ರಫ್ ಬಸ್ತಿಕೋಡಿ, ತುಲು ಲಿಪಿ ಶಿಕ್ಷಕರಾದ ಪೂರ್ಣಿಮಾ ಬಂಟ್ವಾಳ ಹಾಗೂ ಪೃಥ್ವಿ ತುಲುವೆ ಉಪಸ್ಥಿತರಿದ್ದರು. ಧೀರಜ್ ಸ್ವಾಗತಿಸಿದರು. ಮಹೇಶ್ ವಂದಿಸಿದರು. ಲಿಖಿತ್‌ರಾಜ್ ಸೆರ್ಕಳ ಕಾರ್ಯಕ್ರಮ ನಿರೂಪಿಸಿದರು.
Be the first to comment on "ಭಂಡಾರಿಬೆಟ್ಟುವಿನಲ್ಲಿ ತುಳು ಲಿಪಿ ಕಲಿಕಾ ಕಾರ್ಯಾಗಾರ"