





ಬಂಟ್ವಾಳ: ನಿವೃತ್ತ ಮುಖ್ಯೋಪಾಧ್ಯಾಯ, ಇರಾ ಗ್ರಾಮದ ಕುಕ್ಕಾಜೆಬೈಲು ನಿವಾಸಿ ದೂಮಣ್ಣ ರೈ (84) ಆಗಸ್ಟ್ 23ರ ರಾತ್ರಿ ನಿಧನ ಹೊಂದಿದರು. ಪತ್ನಿ, ಇಬ್ಬರು ಪುತ್ರರು, ಹಿರಿಯ ಪೊಲೀಸ್ ಅಧಿಕಾರಿ, ಸಾಹಿತಿ ಡಾ. ಧರಣೀದೇವಿ ಮಾಲಗತ್ತಿ ಸಹಿತ ಮೂವರು ಪುತ್ರಿಯರನ್ನು ಅವರು ಹೊಂದಿದ್ದರು. ಕಯ್ಯಾರ ಕಿಂಞಣ್ಣ ರೈಗಳ ಶಿಷ್ಯರಾಗಿದ್ದ ಅವರು ಹವ್ಯಾಸಿ ಯಕ್ಷಗಾನ ಕಲಾವಿದರಾಗಿ ಗುರುತಿಸಿಕೊಂಡಿದ್ದರು. ಅವರ ನಿಧನಕ್ಕೆ ಇರಾ ಗ್ರಾಮ ಪಂಚಾಯಿತಿ ಸಭೆಯಲ್ಲಿ ಮೌನ ಪ್ರಾರ್ಥನೆ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು.

Be the first to comment on "ನಿವೃತ್ತ ಮುಖ್ಯೋಪಾಧ್ಯಾಯ ದೂಮಣ್ಣ ರೈ ನಿಧನ"