ಕಲ್ಲಡ್ಕ ಸರ್ಕಾರಿ ಶಾಲೆ: ಶತಮಾನೋತ್ತರ ಬೆಳ್ಳಿಹಬ್ಬ ಸಮಿತಿ ಆಶ್ರಯದಲ್ಲಿ ಸ್ಮರಣ ಸಂಚಿಕೆ ಬಿಡುಗಡೆ

ಬಂಟ್ವಾಳ: ಶತಮಾನೋತ್ತರ ಬೆಳ್ಳಿಹಬ್ಬದ ಸಂಭ್ರಮ ಶಾಲೆಗೆ ಹೊಸರೂಪ ತಂದು ಕೊಟ್ಟಿದೆ, ಸ್ಮರಣ ಸಂಚಿಕೆ ಮನ್ವಂತರ ಮುಂದಿನ ತಲೆಮಾರಿಗೂ ದಾರಿದೀಪವಾಗಲಿ ಎಂದು ಕಲ್ಲಡ್ಕ ಮಾದರಿ  ಶಾಲೆಯ ಹಳೆ ವಿದ್ಯಾರ್ಥಿ, ಉದ್ಯಮಿ  ಹಾಜಿ  ಎನ್.ಸುಲೈಮಾನ್ ಹೇಳಿದರು.

 ಕಲ್ಲಡ್ಕ ಮಾದರಿ ಹಿ.ಪ್ರಾ.ಶಾಲೆಯ ಶತಮಾನೋತ್ತರ ಬೆಳ್ಳಿಹಬ್ಬ ಸಮಿತಿಯ ಆಶ್ರಯದಲ್ಲಿ  “ಮನ್ವಂತರ – ಶತರಜತ ಹೆಜ್ಜೆ” ಸ್ಮರಣ ಸಂಚಿಕೆಯನ್ನು ಬುಧವಾರ ಬೆಳಿಗ್ಗೆ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಒಂದು ಊರಿನ ಶಾಲೆಯು ಒಳ್ಳೆಯ ರೀತಿಯಲ್ಲಿದ್ದರೆ, ಊರು ಒಳ್ಳೆಯದಾಗುತ್ತದೆ, ಅಂತಹಾ ಹಿರಿಮೆ ಪಡೆದಿರುವ ಕಲ್ಲಡ್ಕ ಮಾದರಿ ಶಾಲೆ ಸಾವಿರ ವರ್ಷಗಳ ಕಾಲ ಬೆಳಗಲಿ ಎಂದು ಹಾರೈಸಿದರು. ಕಾರ್ಯಕ್ರಮ ಉದ್ಘಾಟಿಸಿದ ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿಮಾತನಾಡಿ, 1998ರಲ್ಲಿ ನಡೆದ ಶತಮಾನೋತ್ಸವ ಆಚರಣೆಯ ಸಂದರ್ಭವನ್ನು ನೆನಪಿಸಿಕೊಂಡರು. ಮಾಜಿಶಾಸಕ ರುಕ್ಮಯ ಪೂಜಾರಿ  ಅಧ್ಯಕ್ಷತೆ ವಹಿಸಿದ್ದರು. ಸೂಕ್ತ ನಾಯಕತ್ವ ಮಾತ್ರ ಯಾವುದೇ ವ್ಯವಸ್ಥೆಯನ್ನು ಯಶಸ್ವಿಯಾಗಿ ಮುನ್ನಡೆಸುತ್ತದೆ, ಕಲ್ಲಡ್ಕ  ಮಾದರಿ ಶಾಲೆಯ ವ್ಯವಸ್ಥೆ, ಶತಮಾನೋತ್ತರ ಬೆಳ್ಳಿ ಹಬ್ಬದ ಯಶಸ್ಸಿಗೂ‌ ಸರ್ವರ ಸಹಕಾರ ಹಾಗೂ ಪಾಲ್ಗೊಳ್ಳುವಿಕೆ ಯ ಜೊತೆಗೆ  ಸೂಕ್ತ ನಾಯಕತ್ವ ಕಾರಣ ಎಂದರು.  ಕೇಂದ್ರ ಸರ್ಕಾರದ ಎನ್ಎಂಎಂಎಸ್ ಪರೀಕ್ಷೆಯಲ್ಲಿ‌ ಉತ್ತೀರ್ಣಳಾದ ಕು.ದಿಯಾಶ್ರೀ ಯನ್ನು ಉದ್ಯಮಿ ಜಿತೇಂದ್ರ ಎಸ್.ಕೊಟ್ಟಾರಿ ಗೌರವಿಸಿದರು.

ಜಾಹೀರಾತು

ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಐಡಾ ಸುರೇಶ್ ,  ಹಿರಿಯ ವಿದ್ಯಾರ್ಥಿನಿ,ಶಿಕ್ಷಕಿ ಶಶಿಕಲಾ  ಮಾತನಾಡಿದರು. ಗೋಳ್ತಮಜಲು ಗ್ರಾ.ಪಂ. ಅಭಿಷೇಕ್ ಶೆಟ್ಟಿ , ಶಾರದಾ ಸೇವಾ‌ಪ್ರತಿಷ್ಠಾನದ ಅಧ್ಯಕ್ಷರಾದ ನರಸಿಂಹ ಮಡಿವಾಳ ವೇದಿಕೆಯಲ್ಲಿ ಉಪಸ್ಥಿತರಿದ್ದರು.  ಶತಮಾನೋತ್ತರ ಬೆಳ್ಳಿಹಬ್ಬ ಸಮಿತಿಯ  ಅಧ್ಯಕ್ಷ ನಾಗೇಶ್ ಸ್ವಾಗತಿಸಿದರು. ಶಾಲಾಮುಖ್ಯಶಿಕ್ಷಕ ಅಬೂಬಕರ್ ಅಶ್ರಫ್  ಪ್ರಾಸ್ತಾವಿಕವಾಗಿ ಮಾತನಾಡಿ, ಶತಮಾನೋತ್ತರ ಬೆಳ್ಳಿ ಹಬ್ಬದ ಈ ಸಂದರ್ಭ ಶಾಲೆಯ ಮಕ್ಕಳ ಸಂಖ್ಯೆ 465 ಕ್ಕೆ ಏರಿಕೆಯಾಗಿರುವುದು ಹೆಮ್ಮೆಯ ವಿಚಾರ ಎಂದರು.ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ರಾಜೇಶ್ ಕೊಟ್ಟಾರಿ ಕಾರ್ಯಕ್ರಮ‌ ನಿರ್ವಹಿಸಿದರು. ಹಿರಿಯ ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ಯತೀನ್ ಕುಮಾರ್ ವಂದಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಕಲ್ಲಡ್ಕ ಸರ್ಕಾರಿ ಶಾಲೆ: ಶತಮಾನೋತ್ತರ ಬೆಳ್ಳಿಹಬ್ಬ ಸಮಿತಿ ಆಶ್ರಯದಲ್ಲಿ ಸ್ಮರಣ ಸಂಚಿಕೆ ಬಿಡುಗಡೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*