![](https://i0.wp.com/bantwalnews.com/wp-content/uploads/2020/09/ಬಂಟ್ವಾಳನ್ಯೂಸ್.jpg?resize=640%2C236&ssl=1)
![](https://i0.wp.com/bantwalnews.com/wp-content/uploads/2021/08/WhatsApp-Image-2021-08-23-at-09.27.36.jpeg?resize=512%2C1024&ssl=1)
![](https://i0.wp.com/bantwalnews.com/wp-content/uploads/2021/03/WhatsApp-Image-2021-03-07-at-15.28.54.jpeg?resize=724%2C1024&ssl=1)
![](https://i0.wp.com/bantwalnews.com/wp-content/uploads/2021/07/aaniya-darbar.jpeg?resize=456%2C640&ssl=1)
![](https://i0.wp.com/bantwalnews.com/wp-content/uploads/2021/04/BHADRA-9.jpeg?resize=777%2C874&ssl=1)
![](https://i0.wp.com/bantwalnews.com/wp-content/uploads/2021/08/DM-KULAL.jpg?resize=390%2C531&ssl=1)
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ,ಹಿರಿಯ ಪತ್ರಕರ್ತ,ಸಂಘಟಕ,ಸಾಮಾಜಿಕ ಕಾರ್ಯಕರ್ತ ಡಿ.ಎಂ.ಕುಲಾಲ್ (54) (ದೈಪಲ ಮಾಧವ ಕುಲಾಲ್) ಅವರು ಸುಧೀರ್ಘ ಕಾಲದ ಅಸೌಖ್ಯದಿಂದ ಗುರುವಾರ ಮಧ್ಯಾಹ್ನ ದೈಪಲದಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ತಾಯಿ, ಪತ್ನಿ,ಒಂದು ಹೆಣ್ಣು,ಒಂದು ಗಂಡು ಮಕ್ಕಳ ಸಹಿತ ಅಪಾರ ಬಂಧು, ಮಿತ್ರರನ್ನು ಅವರು ಅಗಲಿದ್ದಾರೆ. ಮುಂಗಾರು, ಮಂಗಳೂರು ಮಿತ್ರ, ನೇತ್ರಾವತಿ ವಾರ್ತೆ ಪತ್ರಿಕೆಯಲ್ಲಿ ಪತ್ರಕರ್ತರಾಗಿ ಕಾರ್ಯ ನಿರ್ವಹಿಸಿದ್ದ ಅವರು ಬಳಿಕ ವಿವಿಧ ಪತ್ರಿಕೆಗಳಿಗೆ ಲೇಖನವನ್ನು ಬರೆಯುತ್ತಿದ್ದರು. ಅವರ ಬಂಧುವಾಗಿದ್ದ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ದಿವಂಗತ ಡಾ.ಅಮ್ಮೆಂಬಳ ಬಾಳಪ್ಪ ಅವರ ಜೀವನಚರಿತ್ರೆಯ ಪುಸ್ತಕ ಸೇರಿದಂತೆ ಒಟ್ಟು 4 ಕೃತಿಗಳನ್ನು ಬರೆದಿದ್ದರು.ಲೇಖಕರಲ್ಲದೆ ಉತ್ತಮ ಭಾಷಣಕಾರರೂ ಆಗಿದ್ದ ಅವರು, ಉಜಿರೆಯಲ್ಲಿ ನಡೆದ ವಿಶ್ವ ತುಳು ಸಾಹಿತ್ಯ ಸಮ್ಮೇಳನದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದನ್ನು ಗಮನಿಸಿ ಧರ್ಮಸ್ಥಳದ ಡಾ.ವೀರೇಂದ್ರ ಹೆಗ್ಗಡೆಯವರು ಪುರಸ್ಕರಿಸಿದ್ದಲ್ಲದೆ ಹಲವಾರು ಸನ್ಮಾನಗಳಿಗೂ ಅವರು ಪಾತ್ರರಾಗಿದ್ದರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ವತಿಯಿಂದ ಅವರ ನಿವಾಸದಲ್ಲಿಯೇ ಚಾವಡಿ ಪುರಸ್ಕಾರ ನೀಡಿ ಗೌರವಿಸಲಾಗಿತ್ತು. ಬಂಟ್ವಾಳ ತಾಲೂಕು ಪತ್ರಕರ್ತರ ಸಂಘದಲ್ಲಿ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದ ಅವರು ಬಂಟ್ವಾಳ ತಾಲೂಕು ಕುಲಾಲ ಸಮಾಜ ಸುಧಾರಕ ಸಂಘದಲ್ಲಿ ಸಕ್ರೀಯ ಸದಸ್ಯ,ಪದಾಧಿಕಾರಿಯಾಗಿಯು ಕಾರ್ಯನಿರ್ವಹಿಸಿದ್ದರು, ಮಾಣಿಲ ಶ್ರೀಧಾಮದ ಸೇವಾ ಸಮಿತಿಯಲ್ಲಿ ಅವರು ಸಕ್ರಿಯರಾಗಿದ್ದರು. ಕುಲಾಲ ಮಠ ಕುಂಭೋಧರಿ ದೇವಿ ಟ್ರಸ್ಟ್ ನ ಸ್ಥಾಪಕರು ಆಗಿದ್ದರು.
ಸಂತಾಪ: ಡಿ.ಎಂ.ಕುಲಾಲ್ ಅವರ ನಿಧನಕ್ಕೆ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ, ಮಾಜಿ ಸಚಿವ ಬಿ. ರಮಾನಾಥ ರೈ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ತುಳುಕೂಟ ಅಧ್ಯಕ್ಷ ಸುದರ್ಶನ್ ಜೈನ್, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಎ.ಸಿ.ಭಂಡಾರಿ, ಮಹಾರಾಷ್ಟ್ರ ಕನ್ನಡಿಗ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ರೋನ್ಸ್ ಬಂಟ್ವಾಳ, ಫರಂಗಿಪೇಟೆ ಸೇವಾಂಜಲಿ ಪ್ರತಿಷ್ಠಾನದ ಟ್ರಸ್ಟಿ ಕೆ.ಕೆ.ಪೂಂಜಾ, ಬಂಟ್ವಾಳ ತಾಲೂಕು ಕುಲಾಲ ಸಮಾಜ ಸುಧಾರಕ ಸಂಘ, ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಸಂತಾಪ ವ್ಯಕ್ತಪಡಿಸಿದೆ.
Be the first to comment on "ಕರ್ನಾಟಕ ತುಳು ಅಕಾಡೆಮಿ ಮಾಜಿ ಸದಸ್ಯ, ಹಿರಿಯ ಪತ್ರಕರ್ತ, ಸಂಘಟಕ, ಸಾಮಾಜಿಕ ಕಾರ್ಯಕರ್ತ ಡಿ.ಎಂ.ಕುಲಾಲ್ ಇನ್ನಿಲ್ಲ"