ಬಂಟ್ವಾಳ: ನರಿಕೊಂಬು ಗ್ರಾಮ ಪಂಚಾಯಿತಿಯಲ್ಲಿ ಪಿಡಿಒ ಆಗಿ ಕರ್ತವ್ಯ ಸಲ್ಲಿಸುತ್ತಿದ್ದ ಶಿವು ಜನಗೊಂಡ ಶುಕ್ರವಾರ ತಡರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಕೆಲ ದಿನಗಳ ಹಿಂದೆ ಅಪಘಾತಕ್ಕೀಡಾಗಿದ್ದ ಅವರಿಗೆ ಎರಡು ದಿನಗಳ ಹಿಂದೆ ದೇಹಾರೋಗ್ಯ ಏರುಪೇರಾಗಿದ್ದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ನಿಧನ ಹೊಂದಿದ್ದಾರೆ ಎಂದು ಅವರ ನಿಕಟವರ್ತಿಗಳು ತಿಳಿಸಿದ್ದಾರೆ. ಮೂಲತಃ ಅಥಣಿಯವರಾದ ಅವರು ಅವಿವಾಹಿತರು. ಬಿ.ಸಿ.ರೋಡಿನ ಕೈಕುಂಜೆಯಲ್ಲಿ ವಾಸವಾಗಿದ್ದರು.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ನರಿಕೊಂಬು ಗ್ರಾಪಂ ಪಿಡಿಒ ನಿಧನ"