ಬಂಟ್ವಾಳ: ಬಿ.ಸಿ.ರೋಡಿನ ಕೈಕುಂಜೆಯಲ್ಲಿರುವ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಭಾನುವಾರ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕೋವಿಡ್ ನಿಯಮಾವಳಿಗಳ ಪ್ರಕಾರ ಸರಳವಾಗಿ ನಡೆಯಿತು. ಜ್ಯೋತಿ ಬೆಳಗಿಸಿ, ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮವನ್ನು ಅಧ್ಯಕ್ಷತೆ ವಹಿಸಿದ್ದ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಉದ್ಘಾಟಿಸಿದರು.
ಲಯನ್ಸ್ ಕ್ಲಬ್ ಅಧ್ಯಕ್ಷ ಡಾ. ವಸಂತ ಬಾಳಿಗಾ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಉಮಾನಾಥ ರೈ ಮೇರಾವು, ಅಕ್ಷರ ದಾಸೋಹ ಸಹನಿರ್ದೇಶಕರಾದ ನೋಣಯ್ಯ ನಾಯ್ಕ, ಶಿಕ್ಷಣ ಸಂಪನ್ಮೂಲ ಕೇಂದ್ರದ ಮುಖ್ಯಸ್ಥ ರಾಘವೇಂದ್ರ ಬಲ್ಲಾಳ್, ಶಿಕ್ಷಕರ ವಿವಿಧ ಸಂಘಟನೆಗಳ ಅಧ್ಯಕ್ಷರಾದ ಸಂತೋಷ್ ಕುಮಾರ್, ನ್ಯಾನ್ಸಿ, ಮುರಳೀಕೃಷ್ಣ ರಾವ್, ಜಯರಾಮ್, ಕೊರಗಪ್ಪ ಭಂಡಾರಿ, ಚಿನ್ನಪ್ಪ ಕೆ. ಜಾಲ್ಸೂರು, ಜತ್ತಪ್ಪ ಗೌಡ, ಇಂದುಶೇಖರ್, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ವಿಷ್ಣುನಾರಾಯಣ ಹೆಬ್ಬಾರ್ ಉಪಸ್ಥಿತರಿದ್ದರು.
ಒಟ್ಟು 48 ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು. 2019ನೇ ಸಾಲಿನ ರಾಜ್ಯಪ್ರಶಸ್ತಿ ಪುರಸ್ಕೃತ ಹಾಗೂ 2020ನೇ ಸಾಲಿನ ಜಿಲ್ಲಾ ಪ್ರಶಸ್ತಿ ಪುರಸ್ಕೃತ ಶಿಕ್ಷಕರನ್ನು ಸನ್ಮಾನಿಸಲಾಯಿತು. ತಾಲೂಕಿನ ಕೊರಗಪ್ಪ ಭಂಡಾರಿ, ಮುರಳೀಕೃಷ್ಣ ರಾವ್, ರಾಘವೇಂದ್ರ, ಸುನಿಲ್ ಸಿಕ್ವೇರ, ಚಿತ್ರಕಲಾ ಕೆ, ಓಡ್ರಿನ್ ಡಿಸೋಜ ಅವರಿಗೆ ಈ ಸಾಲಿನ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಬಾರಿ ಎಸ್ಸೆಸ್ಸೆಲ್ಸಿಯಲ್ಲಿ 625 ಅಂಕ ಗಳಿಸಿದ ಬಂಟ್ವಾಳದ ಪ್ರತೀಕ್ ಮಲ್ಯ ಅವರನ್ನು ಗೌರವಿಸಲಾಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್ ಎಂ.ಪಿ.. ಸ್ವಾಗತಿಸಿದರು. ಶಿಕ್ಷಣ ಸಂಯೋಜಕಿ ಸುಜಾತಾ ಕುಮಾರಿ ವಂದಿಸಿದರು. ನಿವೃತ್ತ ಮುಖ್ಯೋಪಾಧ್ಯಾಯ ಬಿ.ರಾಮಚಂದ್ರ ರಾವ್ ಕಾರ್ಯಕ್ರಮ ನಿರ್ವಹಿಸಿದರು.