ಕಲ್ಲಡ್ಕ

ಬಾಕಿಲ ಗರಡಿಯಲ್ಲಿ ಗುರುವನ ಲೋಕಾರ್ಪಣೆ, ಸಸಿ ನೆಟ್ಟ ಸಚಿವ ಕೋಟ

ಬಂಟ್ವಾಳ:: ಗುರು ಬೆಳದಿಂಗಳು ಪ್ರಕೃತಿಗೆ ಬೆಳಕು ಚೆಲ್ಲುವ ಕಾರ್ಯ ಮಾಡಿದೆ ಎಂದು ಹಿಂದುಳಿದ ವರ್ಗಗಳ ಮತ್ತು ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಕುದ್ರೋಳಿ ಗುರುಬೆಳದಿಂಗಳು ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 167ನೇ ಜನುಮ ದಿನದ ಅಂಗವಾಗಿ ಬಂಟ್ವಾಳ ತಾಲೂಕಿನ ಬಾಕಿಲ ಗುತ್ತು, ಅನಂತಾಡಿ ಶ್ರೀ ಉಳ್ಳಾಲ್ತಿ ವೈದ್ಯನಾಥೇಶ್ವರ ಕ್ಷೇತ್ರ, ಬ್ರಹ್ಮ ಬೈದರ್ಕಳ ಗರಡಿಯಲ್ಲಿ, ಸೋಮವಾರ ಅಳಿವಿನಂಚಿನಲ್ಲಿರುವ ಔಷಧೀಯ ಸಸಿ ನೆಡುವ ಸರಣಿ ಸಮಾರೋಪ ಮತ್ತು 167 ಗಿಡಗಳ ‘ಗುರುವನ’ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

9 ಕಡೆ ಸಸಿಗಳ ನಾಟಿ: ನಾರಾಯಣ ಗುರುಗಳ ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎನ್ನುವ ತತ್ವ ಪಾಲನೆ ದೃಷ್ಟಿಯಿಂದ ಗೆಜ್ಜೆಗಿರಿ ನಂದನ ಬಿತ್ತ್‌ಲ್ ಕ್ಷೇತ್ರ, ಉಳ್ಳಾಲ‌ ಜುಮಾ ಮಸೀದಿ, ಸಯ್ಯಿದ್ ಮದನಿ ದರ್ಗಾ, ಮೂಲ್ಕಿ ಚಂದ್ರನಾಥ ಸ್ವಾಮಿ ಬಸದಿ, ಕಾಪಿಕಾಡ್ ಶ್ರೀ ಗುರು ವೈದ್ಯನಾಥ ಶ್ರೀ ಚಾಮುಂಡೇಶ್ವರಿ ದೈವಸ್ಥಾನ, ಕಟಪಾಡಿ ವಿಶ್ವನಾಥ ಕ್ಷೇತ್ರ, ಸೇಂಟ್ ಜೋಸೆಫ್‌ ಸೆಮಿನರಿ ಜೆಪ್ಪು, ಬ್ರಹ್ಮ ಬೈದರ್ಕಳ ಗರೋಡಿ ಕಂಕನಾಡಿ, ಗುರುದ್ವಾರ ಸಾಹಿಬ್ ಕೋಡಿಕಲ್, ಅನಂತಾಡಿ ಶ್ರೀ ಉಳ್ಳಾಲ್ತಿ ವೈದ್ಯನಾಥೇಶ್ವರ ಕ್ಷೇತ್ರ, ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಬ್ರಹಶ್ರೀ ನಾರಾಯಣ ಗುರುಗಳ  167 ನೇ ಜನ್ಮದಿನಾಚರಣೆಯ ಸವಿನೆನಪಿಗಾಗಿ  ಅಳಿವಿನಂಚಿನಲ್ಲಿರುವ 167 ಔಷಧೀಯ ಸಸಿಗಳನ್ನು ನೆಡಲಾಯಿತು. ಗುರು ಬೆಳದಿಂಗಳು ಅಧ್ಯಕ್ಷ ಆರ್‌. ಪದ್ಮರಾಜ್ ಅಧ್ಯಕ್ಷತೆ ವಹಿಸಿದ್ದರು. ಪರಿಸರಪ್ರೇಮಿ ಮಾಧವ ಉಳ್ಳಾಲ್, ಸಮಾಜ ಸೇವಕ ರೋಹಿದಾಸ್ ಅವರನ್ನು ಗೌರವಿಸಲಾಯಿತು. ದ.ಕ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ಮಾಜಿ ಸಚಿವ ಬಿ.ರಮಾನಾಥ ರೈ, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್. ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೆಂದ್ರ ಪೂಜಾರಿ, ಬಾಕಿಲ ಗುತ್ತು ಅನಂತಾಡಿ ಶ್ರೀ ಉಳ್ಳಾಲ್ತಿ ವೈದ್ಯನಾಥೇಶ್ವರ ಕ್ಷೇತ್ರ, ಬ್ರಹ್ಮ ಬೈದರ್ಕಳ ಗರಡಿಯ ಆಡಳಿತ ಅಧ್ಯಕ್ಷ ವಸಂತ ಪೂಜಾರಿ, ಉಪಾಧ್ಯಕ್ಷ ಹರೀಶ್ ಸುವರ್ಣ, ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ರಾಜಾರಾಮ್‌, ಗುರು ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ಜಯಾನಂದ, ಗುರುಬೆಳದಿಂಗಳು ಸಂಸ್ಥೆ ಉಪಾಧ್ಯಕ್ಷ ರಘುನಾಥ ಮಾಬಿಯಾನ್, ಮಾರ್ಗದರ್ಶಕ ಕಿಶೋರ್ ದಂಡೆಕೇರಿ, ಮಂಗಳೂರು ಮಹಾನಗರ ಪಾಲಿಕೆ ಸದಸ್ಯರಾದ ಅನಿಲ್ ಕುಮಾರ್‌, ನೇರಳಕಟ್ಟೆ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷ  ಪುಷ್ಪರಾಜ್ ಚೌಟ, ದ.ಕ ಜಿಪಂ ನ್ಯಾಯ ಸಮಿತಿ ಮಾಜಿ ಅಧ್ಯಕ್ಷ ಮಾಧವ ಮಾವೆ, ಅನಂತಾಡಿ ಗ್ರಾಪಂ ಮಾಜಿ ಅಧ್ಯಕ್ಷ ಗಣೇಶ್ ಪೂಜಾರಿ,ಉಪಾಧ್ಯಕ್ಷ ಕುಸುಮಾಧರ, ಮಾಜಿ ಅಧ್ಯಕ್ಷ ಸನತ್ ಕುಮಾರ್ ರೈ, ಶಿವಗಿರಿ ಮಹಿಳಾ ಸಹಕಾರಿ ಸಂಘ ಅಧ್ಯಕ್ಷೆ ಜಯಂತಿ ಬಂಗೇರ, ಸಾಮಾಜಿಕ ಕಾರ್ಯಕರ್ತ ಸತೀಶ್ ಗುರುನಗರ, ಗುರು ಚಾರಿಟೆಬಲ್ ಟ್ರಸ್ಟ್ ಮಾಜಿ ಅಧ್ಯಕ್ಷ ಚಂದ್ರಶೇಖರ್ ನಾನಿಲ್, ಗೆಜ್ಜೆಗಿರಿ ನಂದನ ಬಿತ್ತ್‌ಲ್ ಕ್ಷೇತ್ರದ ಅಧ್ಯಕ್ಷ ಜಯಂತ ನಡುಬೈಲ್, ಪ್ರಧಾನ ಕಾರ್ಯದರ್ಶಿ ರವಿ ಚಿಲಿಂಬಿ ಮೊದಲಾದವರು ಉಪಸ್ಥಿತರಿದ್ದರು. ದಿನೇಶ್ ಸುವರ್ಣ ರಾಯಿ ಕಾರ್ಯಕ್ರಮ ನಿರೂಪಿಸಿದರು. ರಾಜೇಶ್ ಸುವರ್ಣ ವಂದಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ