ಬಂಟ್ವಾಳ: ಬಂಟ್ವಾಳದಲ್ಲಿ ಹಲಸಿನೊಂದಿಗೆ ಫೊಟೋ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಿತು. ಬಂಟ್ವಾಳ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಡಾ.ವಸಂತ ಬಿ ಬಾಳಿಗಾ ಅವರು ರಾರಾಸಂ ಫೌಂಡೇಶನ್ ಬಂಟ್ವಾಳ ಮತ್ತು ಹಲಸು ಪ್ರೇಮಿ ಕೂಟ, ಬಂಟ್ವಾಳ ಸಹಯೋಗದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಮಾತನಾಡಿ ಹಲಸು ಪ್ರೇಮಿ ಕೂಟದ ಪಾತ್ರ ಸಮಾಜಕ್ಕೆ ಉತ್ತಮ ಕೊಡುಗೆ ಎಂದರು.
ಲೇಖಕ ನಾ ಕಾರಂತ ಪೆರಾಜೆ, ನಿವೃತ್ತ ಅರಣ್ಯ ಅಧಿಕಾರಿ ಮತ್ತು ಹಲಸು ಬೆಳೆಗಾರ ಗ್ಯಾಬ್ರಿಯಲ್ ವೇಗಸ್, ಕೃಷಿಕ, ಪತ್ರಕರ್ತ ಮಹೇಶ್ ಪುಚ್ಚಪ್ಪಾಡಿ, ಹಲಸು ಸ್ನೇಹಿ ಕೂಟದ ಮುಳಿಯ ವೆಂಕಟ ಕೃಷ್ಣ ಶರ್ಮ, ಹಲಸು ಪ್ರೇಮಿಕೂಟದ ಮೌನೇಶ್ ಮಲ್ಯ ಮಾತನಾಡಿದರು.ರಾರಾಸಂ ಸಂಸ್ಥೆಯ ಅಧ್ಯಕ್ಷರಾದ ರಾಧಾಕೃಷ್ಣ ಬಂಟ್ವಾಳ ಸ್ವಾಗತಿಸಿದರು. ರಾರಾಸಂ ನಿರ್ದೇಶಕರಾದ ಕೇಶವ್ ಮಾಸ್ಟರ್ ಧನ್ಯವಾದ ಸಮರ್ಪಿಸಿದರು. ಶಿಕ್ಷಕರಾದ ದಾಮೋದರ್ ಮಾಸ್ಟರ್ ನಿರೂಪಿಸಿದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…