ಬಂಟ್ವಾಳ: ಸುಶಿಕ್ಷಿತ ಸಮಾಜ ನಿರ್ಮಾಣಗೊಂಡಾಗ ನೈಜ ಬಲಿಷ್ಟ ರಾಷ್ಟ್ರ ನಿರ್ಮಾಣವಾಗುತ್ತದೆ ಎಂದು ಲೊರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ಅಧ್ಯಕ್ಷ ರಾಘವೇಂದ್ರ ಭಟ್ ಹೊಕ್ಕಾಡಿಗೋಳಿ ಹೇಳಿದ್ದಾರೆ. ಇಲ್ಲಿನ ಲೊರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ವತಿಯಿಂದ ಏರ್ಪಡಿಸಿದ್ದ ಎಸ್ಸೆಎಸ್ಸೆಲ್ಸಿ ಗರಿಷ್ಟ ಅಂಕ ಗಳಿಸಿದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಎಸ್ಎಸ್ಎಲ್ಸಿ ಪರೀಕ್ಷೇಯಲ್ಲಿ ಅತ್ಯಧಿಕ ಅಂಕ ಪಡೆದ ರೋಟರಿ ಕ್ಲಬ್ ಲೊರೆಟ್ಟೋ ಹಿಲ್ಸ್ನ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಲೊರೆಟ್ಟೊ ನಿಯೋಜಿತ ಜಿಲ್ಲಾ ಗವರ್ನರ್ ಪ್ರಕಾಶ್ ಕಾರಂತ್ ಅವರು ತೆಂಗು ಉತ್ಪಾದಕರ ಸಹಕಾರಿ ಸೊಸೈಟಿ ಅಧ್ಯಕ್ಷ ರಾಜಾ ಬಂಟ್ವಾಳ ಮತ್ತು ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಿದರು. ಸಹಾಯಕ ಗವರ್ನರ್ ಸುರೇಂದ್ರ ಕಿಣಿ, ವಲಯ ಕಾರ್ಯದರ್ಶಿ ಜಯರಾಮ ರೈ, ವಲಯ ಲೆಫ್ಟಿನೆಂಟ್ ಅವಿಲ್ ಮಿನೇಜಸ್ ಶುಭ ಹಾರೈಸಿದರು. ನಿಕಟಪೂರ್ವಾಧ್ಯಕ್ಷ ಆ್ಯಂಟನಿ ಸಿಕ್ವೇರಾ, ಎಂ.ಪದ್ಮರಾಜ ಬಲ್ಲಾಳ್, ಕಾರ್ಯದರ್ಶಿ ರಮೇಶ್ ನಾಯಕ್ ರಾಯಿ, ಸುರೇಶ್ ಕುಮಾರ್ ಶೆಟ್ಟಿ, ರಾಮಚಂದ್ರ ಶೆಟ್ಟಿಗಾರ್ ಅಣ್ಣಳಿಕೆ, ಐವನ್ ಮಿನೇಜಸ್, ಹರಿಪ್ರಸಾದ್ ಶೆಟ್ಟಿ ಕುರುಡಾಡಿ, ಶೃತಿ ಮಾಡ್ತಾ ಮತ್ತಿತರರು ಇದ್ದರು.
Be the first to comment on "ಲೊರೆಟ್ಟೊ ರೋಟರಿಯಿಂದ ಪ್ರತಿಭಾನ್ವಿತರಿಗೆ ಸನ್ಮಾನ"