ಬಂಟ್ವಾಳ: ಸೋಣ ಅಮವಾಸ್ಯೆಯ ದಿನದಿಂದ ಬಾದ್ರಪದ ಶುಕ್ಲ ಚೌತಿ ಹಬ್ಬದ ದಿನದವರೆಗೆ ಸುಳ್ಳಮಲೆ ತೀರ್ಥಸ್ನಾನಕ್ಕೆ ಪೂರ್ವಭಾವಿಯಾಗಿ ಬಿದಿರಿನ ಕೇರ್ಪು ( ಏಣಿ) ಇಡುವ ಸಂಪ್ರದಾಯ ನಡೆಯಿತು. ಸರಕಾರದ ಸುತ್ತೋಲೆಯಂತೆ ಈ ಬಾರಿ ಸರಳವಾಗಿ ಭಕ್ತಾದಿಗಳಿಗೆ ಗುಹಾತೀರ್ಥ ಸ್ನಾನಕ್ಕೆ ಅವಕಾಶ ನೀಡದೆ ಸಂಪ್ರದಾಯದಂತೆ ಧಾರ್ಮಿಕ ವಿಧಿ ವಿಧಾನಗಳನ್ನು ನಡೆಸಲಾಯಿತು.
ಗುಹಾ ತೀರ್ಥಕ್ಕೆ ಪ್ರಾರ್ಥನೆ ಸಲ್ಲಿಸಿ,ಕೇರ್ಪು ಇಟ್ಟು ದಾರ್ಮಿಕ ವಿಧಿ-ವಿದಾನವನ್ನು ನೆರವೇರಿಸಿ ಅರಸು ಗುಡ್ಡೆಚಾಮುಂಡಿ ಮತ್ತು ಪ್ರಧಾನಿ ಪಂಜುರ್ಲಿ ದೈವಗಳಿಗೆ ತಂಬಿಲ ನೆರವೇರಿಸಲಾಯಿತು.ಈ ಸಂದರ್ಭ ದೈವದ ಅರ್ಚಕರಾದ ಪಳನೀರು ಅನಂತ ಭಟ್, ಹರಿ ಭಟ್ ,ಮಾಣಿಗುತ್ತು ಸಚಿನ್ ರೈ ಮತ್ತು ಗ್ರಾಮಸ್ತರು ಸೀಮಿತ ಸಂಖ್ಯೆಯಲ್ಲಿ ಉಪಸ್ತಿತರಿದ್ದರುಭಕ್ತಾದಿಗಳಿಗೆ ಗುಹಾ ಪ್ರವೇಶ ಹಾಗು ಗುಹಾತೀರ್ಥ ಸ್ನಾನ ಮಾಡುವುದು ಸಂಪೂರ್ಣವಾಗಿ ನಿಷೇಧಿಸಲಾಗಿದೆ.