




ಬಂಟ್ವಾಳ ತಾಲೂಕಿನಾದ್ಯಂತ ತೆನೆಹಬ್ಬವನ್ನು ಸರಳವಾಗಿ ಆಚರಿಸಲಾಯಿತು. ವಿವರಗಳು ಇಲ್ಲಿವೆ.



ಸಾಮಾಜಿಕ ಅಂತರದೊಂದಿಗೆ ನಡೆದ ಬಲಿ ಪೂಜೆಯಲ್ಲಿ ಭಕ್ತಾದಿಗಳು ಭಕ್ತಿ-ಶ್ರದ್ಧೆಯಿಂದ ಪಾಲ್ಗೊಂಡರು. ಕೋವಿಡ್ ೧೯ ಸೋಂಕಿನ ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಪರ ಆದೇಶದಂತೆ ಕನ್ಯಾಮಾತೆಯ ಪಲ್ಲಕ್ಕಿಯನ್ನು ಮೆರವಣಿಗೆಯಲ್ಲಿ ಕೊಂಡೊಯ್ಯುವುದನ್ನು ರದ್ದು ಪಡಿಸಲಾಗಿತ್ತು. ಬಲಿ ಪೂಜೆಯಲ್ಲಿ ಭಕ್ತಾದಿಗಳು ಭಕ್ತಿಯಿಂದ , ಸಾಮಾಜಿಕ ಅಂತರದಿಂದ ಪಾಲ್ಗೊಳ್ಳಲು ಬೇಕಾದ ಆಸನದ ವ್ಯವಸ್ಥೆಯನ್ನು ಮಾಡಲಾಗಿತ್ತು.ಚರ್ಚ್ ವಠಾರದಲ್ಲಿ ಎಲ್ ಇ ಡಿ ಪರದೆಯನ್ನು ಅಳವಡಿಸಲಾಗಿತ್ತು ಕಳೆದ ೯ ದಿನಗಳಿಂದ ನಡೆದ ಮಾತೆ ಮರಿಯಮ್ಮನವರ ನೋವೆನಾ ಪ್ರಾರ್ಥನೆಗೆ ಮಕ್ಕಳು ಹೂಗಳನ್ನು ಅರ್ಪಿಸಿದರು ಚರ್ಚ್ ವ್ಯಾಪ್ತಿಗೆ ಬರುವ ಎಲ್ಲಾ ವಾಹನಗಳನ್ನು ಆಶೀರ್ವದಿಸಲಾ ಲಾಯಿತು.ಹಾಗೂ ಸಂಭ್ರಮಕ್ಕೆ ಸಹಕರಿಸಿದ ಎಲ್ಲರಿಗೂ ತೆನೆಯನ್ನು ನೀಡಿ ಗೌರವಿಸಲಾಯಿತು. ಮಾತೆ ಮರಿಯಮ್ಮನವರ ಪಲ್ಲಕ್ಕಿಯನ್ನು ಹೂಗಳಿಂದ ಶೃಂಗರಿಸಲಾಗಿತ್ತು. ಚರ್ಚ್ ಪಾಲನಾ ಮಂಡಳಿ ಸಂಭ್ರಮದ ನೇತೃತ್ವ ವಹಿಸಿದ್ದರು.

ಚರ್ಚ್ ಪಾಲನ ಮಂಡಳಿಯ ಉಪಾಧ್ಯಕ್ಷ ನವೀನ್ ಜಾನ್ಸನ್‌ಮೊರಾಸ್, ಕಾರ್ಯದರ್ಶಿ ಕಿರಣ್ ನೊರೊನ್ಹಾ, ಕ್ಲೂನಿ ಕಾನ್ವೆಂಟ್‌ನ ಧರ್ಮಭಗಿನಿ ಅರ್ಚನಾ, ವೈ.ಸಿ.ಎಸ್. ಮತ್ತು ಐ.ಸಿ.ವೈ.ಯಂ., ಚರ್ಚ್ ಪಾಲನ ಮಂಡಳಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.


Be the first to comment on "ಬಂಟ್ವಾಳ ತಾಲೂಕಿನಾದ್ಯಂತ ತೆನೆಹಬ್ಬ ಸರಳ ಆಚರಣೆ"