ಬಿ.ಸಿ.ರೋಡಿನಲ್ಲಿ ಶ್ರೀ ಗಣೇಶೋತ್ಸವ ಸರಳ ಆಚರಣೆ

ಶಾಸಕ ರಾಜೇಶ್ ನಾಯ್ಕ್ ಸಹಿತ ಗಣ್ಯರ ಭೇಟಿ

ಬಂಟ್ವಾಳ: ಹಿಂದು ಧಾರ್ಮಿಕ ಸೇವಾ ಸಮಿತಿ ವತಿಯಿಂದ 42ನೇ ವರ್ಷದ ಗಣೇಶೋತ್ಸವವನ್ನು ಬಿ.ಸಿ.ರೋಡಿನ ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನದಲ್ಲಿ ಶುಕ್ರವಾರ ಸರಳವಾಗಿ ಆಚರಿಸಲಾಯಿತು. ಬೆಳಗ್ಗೆ ಬಂಟ್ವಾಳದಿಂದ ಗಣಪತಿಯನ್ನು ವಾಹನದಲ್ಲಿ ತರಲಾಯಿತು. ಈ ಸಂದರ್ಭ ಶ್ರೀ ರಕ್ತೇಶ್ವರಿ ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷ ರಾಜೇಶ್ ಎಲ್. ನಾಯಕ್,, ಪ್ರಮುಖರಾದ ಸತೀಶ್ ಭಂಡಾರಿ, ಬಿ.ಮೋಹನ್, ಲೋಕನಾಥ ಶೆಟ್ಟಿ,  ಭಾಸ್ಕರ ಟೈಲರ್ ಮೊದಲಾದವರು ಉಪಸ್ಥಿತರಿದ್ದರು. ಕೊರೊನಾ ನಿಯಮಗಳಿಗೆ ಅನುಸಾರವಾಗಿ ದೇವರ ದರ್ಶನವನ್ನು ಮಾಡಲಾಯಿತು. ಗಣೇಶೋತ್ಸವಕ್ಕೆ ಬಂಟ್ವಾಳ ಶಾಸಕ ರಾಜೇಶ್ ಯು.ನಾಯ್ಕ್, ಬುಡಾ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ ಸಹಿತ ಪ್ರಮುಖರು, ಗಣ್ಯರು ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು

About the Author

Bantwal News
2016 ನವೆಂಬರ್ 10ರಂದು ಆರಂಭಗೊಂಡ ಬಂಟ್ವಾಳದ ಮೊದಲ ವೆಬ್ ಪತ್ರಿಕೆ ಇದು. 25 ಲಕ್ಷಕ್ಕಿಂತಲೂ ಅಧಿಕ ಮಂದಿ ಕೇವಲ 45 ತಿಂಗಳಲ್ಲೇ ಓದಿದ ಜಾಲತಾಣವಿದು. ಸಂಪಾದಕ: ಹರೀಶ ಮಾಂಬಾಡಿ. ಬ್ರೇಕಿಂಗ್ ನ್ಯೂಸ್ ಧಾವಂತದಲ್ಲಿ ಅವಸರದ ಸುದ್ದಿ ಕೊಡದೆ, ಮಾಹಿತಿ ಖಚಿತಗೊಂಡ ಬಳಿಕವಷ್ಟೇ ಪ್ರಕಟಿಸಲಾಗುತ್ತದೆ. ಅತಿರಂಜಿತ ಸುದ್ದಿ ಇಲ್ಲಿಲ್ಲ. ಇದು www.bantwalnews.com ಧ್ಯೇಯ.

Be the first to comment on "ಬಿ.ಸಿ.ರೋಡಿನಲ್ಲಿ ಶ್ರೀ ಗಣೇಶೋತ್ಸವ ಸರಳ ಆಚರಣೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*