ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪಿಸಲು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಮನವಿ ಮಾಡಿದ್ದು, ಈ ಕುರಿತು ಬಂಟ್ವಾಳ ತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಿದೆ.
ವೈದ್ಯಕೀಯ ಖಾಸಗೀಕರಣ ಹೆಚ್ಚಾಗಿದ್ದು ಮಂಗಳೂರಿನ ಹೆಸರಾಂತ ಎಲ್ಲಾ ಮೆಡಿಕಲ್ ಕಾಲೇಜುಗಳು ಹಾಗೂ ಆಸ್ಪತ್ರೆಗಳನ್ನು ಕಾರ್ಪೊರೇಟರ್ ವ್ಯಕ್ತಿಗಳು ಚಲಾಯಿಸುತ್ತಿದ್ದು, ಜಿಲ್ಲೆಯಲ್ಲಿ ಒಂದು ಸರಕಾರಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗಳಿಲ್ಲ ಒಂದೇ ಒಂದು ಸರಕಾರಿ ಮೆಡಿಕಲ್ ಕಾಲೇಜುಗಳಿಲ್ಲ ಇದರಿಂದಾಗಿ ಹಲವಾರು ವಿದ್ಯಾರ್ಥಿಗಳು ವೈದ್ಯರಾಗಬೇಕೆಂಬ ಕನಸು, ವೈದ್ಯಕೀಯ ಶಿಕ್ಷಣದಲ್ಲಿ ಪದವಿ ಪಡೆಯಬೇಕೆಂಬ ಕನಸು ಕನಸಾಗಿಯೇ ಉಳಿದಿದೆ ಎಂದು ಹೇಳಿದೆ. ಮೆಡಿಕಲ್ ಕಾಲೇಜು ಸ್ಥಾಪಿಸಬೇಕೆಂದು ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಜನಾಂದೋಲನಕ್ಕೆ ಕರೆ ನೀಡಿದ್ದು ಇದರ ಭಾಗವಾಗಿ ಕ್ಯಾಂಪಸ್ ಫ್ರಂಟ್ ಬಂಟ್ವಾಳ ಜಿಲ್ಲಾ ಸಮಿತಿ ನಿಯೋಗವು ಬಂಟ್ವಾಳ ತಾಲೂಕು ತಹಸೀಲ್ದಾರ್ ರನ್ನು ಭೇಟಿ ಮಾಡಿ, ಮನವಿ ನೀಡಲಾಯಿತು. ಈ ಸಂದರ್ಭಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಜಿಲ್ಲಾಧ್ಯಕ್ಷ ಅಶ್ಫಾಕ್ ತಲಪಾಡಿ, ಜಿಲ್ಲಾ ಕಾರ್ಯದರ್ಶಿ ಐಮಾನ ಬಂಟ್ವಾಳ ಹಾಗೂ ಕ್ಯಾಂಪಸ್ ಫ್ರಂಟ್ ವಿಟ್ಲ ಜಿಲ್ಲಾ ಕಾರ್ಯದರ್ಶಿ ಸಜ್ಜದ್ ಉಪಸ್ಥಿತರಿದ್ದರು.
Be the first to comment on "ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪಿಸಲು ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಮನವಿ"