ಬಂಟ್ವಾಳ: ದೆಹಲಿಯಲ್ಲಿ ಅತ್ಯಾಚಾರ ಖಂಡಿಸಿ ಸೋಶಿಯಲ್ ಡೆಮೋಕ್ರಟಕ್ ಪಾರ್ಟಿ ಆಫ್ ಇಂಡಿಯಾ ಬಂಟ್ವಾಳ ವಿಧಾನಸಭಾ ಕ್ಷೆತ್ರ ಸಮಿತಿ ವತಿಯಿಂದ ಕ್ಷೆತ್ರ ಅಧ್ಯಕ್ಷರಾದ ಯೂಸುಫ್ ಅಲಡ್ಕ ಅಧ್ಯಕ್ಷತೆಯಲ್ಲಿ ಹಕ್ಕೋತ್ತಾಯ ಸಭೆ ಬಿ ಸಿ ರೋಡ್ ಜಂಕ್ಷನ್ ನಲ್ಲಿ ನಡೆಯಿತು.
ಎಸ್ ಡಿ ಪಿ ಐ ರಾಜ್ಯ ಮುಖಂಡ ಫಯಾಝ್ ದೊಡ್ಡಮನೆ, ವಿಮೆನ್ಸ್ ಇಂಡಿಯಾ ಮೂಮೆಂಟ್ ರಾಜ್ಯಾಧ್ಯಕ್ಷೆ ಶಾಹಿದ ತಸ್ನಿಮ್ ಮಾತನಾಡಿದರು. ಪ್ರತಿಭಟನೆಯಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಇಕ್ಬಾಲ್ ಐ ಎಂ ಆರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಾಹುಲ್ ಎಸ್ ಎಚ್, ಕ್ಷೆತ್ರ ಉಪಾಧ್ಯಕ್ಷರಾದ ಉಬೈದ್ ಬಂಟ್ವಾಳ ಕಾರ್ಯದರ್ಶಿ ಖಲಂದರ್ ಪರ್ತಿಪ್ಪಾಡಿ, ಬಂಟ್ವಾಳ ಪುರಸಭಾ ಸಮಿತಿ ಅಧ್ಯಕ್ಷರಾದ ಶರೀಫ್ ವಳವೂರು, ಪುರಸಭಾ ಸದಸ್ಯರಾದ ಮುನಿಶ್ ಅಲಿ, ಇದ್ರಿಶ್ ಪಿಜೆ, ಉಪಸ್ಥಿತರಿದ್ದರು. ಪ್ರತಿಭಟನೆಯಲ್ಲಿ ದಿಲ್ಲಿ ಮತ್ತು ಕೇಂದ್ರ ಸರ್ಕಾರ ಹಾಗೂ ಕಾಮುಕರ ವಿರುದ್ಧ ಘೋಷಣೆ ಕೂಗಲಾಯಿತು. ಕ್ಷೇತ್ರ ಸಮಿತಿ ಸದಸ್ಯರಾದ ಮಲಿಕ್ ಕೊಳಕೆ ಕಾರ್ಯಕ್ರಮ ನಿರೂಪಿಸಿ ವಂಧಿಸಿದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…