ವಂಡರ್ ಲಾ ನೆರವು: ಕಡೇಶಿವಾಲಯ ಹಿರಿಯ ಪ್ರಾಥಮಿಕ ಶಾಲೆಯಲ್ಲೀಗ ಸುಸಜ್ಜಿತ ಶೌಚಾಲಯ

ಬಂಟ್ವಾಳ: ಬಂಟ್ವಾಳ ತಾಲೂಕಿನ  ಕಡೇಶಿವಾಲಯದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸುಸಜ್ಜಿತ ಶೌಚಾಲಯವೊಂದು ನಿರ್ಮಾಣವಾಗಿದೆ. ವಂಡರ್ ಲಾ ತನ್ನ ಸಿ.ಎಸ್.ಆರ್. ನಿಧಿಯಿಂದ ನೀಡಿದ ಅನುದಾನದೊಂದಿಗೆ ಜಿಪಂ, ಗ್ರಾಪಂನ ನೆರವೂ ಸೇರಿಸಿಕೊಂಡು ಈ ಶೌಚಾಲಯವನ್ನು ನಿರ್ಮಿಸಲಾಗಿದೆ. 1935ರಲ್ಲಿ ಶಾಲೆ ನಿರ್ಮಾಣವಾಗಿದ್ದು, ಸುಸಜ್ಜಿತ ಶೌಚಾಲಯದ ಅವಶ್ಯಕತೆಯನ್ನು ಮನಗಂಡು ಹಾಗೂ ಬಾಲಕ, ಬಾಲಕಿಯರಿಗೆ ಪ್ರತ್ಯೇಕವಾದ ಶೌಚಾಲಯ ನಿರ್ಮಿಸುವ ಉದ್ದೇಶದಿಂದ ಇದನ್ನು ನಿರ್ಮಿಸಲಾಗಿದೆ. ವಂಡರ್ ಲಾ ಹಾಲಿಡೇಸ್ ತನ್ನ ಸಿಎಸ್‌ಆರ್ ನಿಧಿಯಲ್ಲಿ ಶೌಚಾಲಯವನ್ನು ನಿರ್ಮಿಸಲು ದೇಣಿಗೆ ಕೊಟ್ಟಿದೆ.

ಗ್ರಾಪಂ ಅಧ್ಯಕ್ಷ ಸುರೇಶ್ ಬನಾರಿ ಅಧ್ಯಕ್ಷತೆಯಲ್ಲಿ ಇದನ್ನು ವಿದ್ಯಾರ್ಥಿಗಳ ಉಪಯೋಗಕ್ಕಾಗಿ ಹಸ್ತಾಂತರಿಸಲಾಗಿದೆ. ಜಿಪಂ ಮಾಜಿ ಸದಸ್ಯರಾದ ಕಮಲಾಕ್ಷಿ ಪೂಜಾರಿ, ವಂಡರ್ ಲಾ ಕಚೇರಿಯ ಮಂಗಳೂರು ಮ್ಯಾನೇಜರ್ ಸಂತೋಷ್, ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ರಮೇಶ್ ಆಚಾರ್ಯ, ಶಾಲಾ ಮುಖ್ಯ ಶಿಕ್ಷಕಿ ಉಮಾವತಿ, ಆಂಗ್ಲ ಮಾಧ್ಯಮ ಶಾಲಾ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಮಾಧವ ರೈ, ಗ್ರಾಪಂ ಸದಸ್ಯರು, ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಸುಧಾಕರ ಭಟ್, ಗುತ್ತಿಗೆ ಇಂಜಿನಿಯರ್ ದಯಾನಂದ ಶೆಟ್ಟಿ ಮತ್ತಿತರರು ಈ ಸಂದರ್ಭ ಇದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು

About the Author

Bantwal News
2016 ನವೆಂಬರ್ 10ರಂದು ಆರಂಭಗೊಂಡ ಬಂಟ್ವಾಳದ ಮೊದಲ ವೆಬ್ ಪತ್ರಿಕೆ ಇದು. 25 ಲಕ್ಷಕ್ಕಿಂತಲೂ ಅಧಿಕ ಮಂದಿ ಕೇವಲ 45 ತಿಂಗಳಲ್ಲೇ ಓದಿದ ಜಾಲತಾಣವಿದು. ಸಂಪಾದಕ: ಹರೀಶ ಮಾಂಬಾಡಿ. ಬ್ರೇಕಿಂಗ್ ನ್ಯೂಸ್ ಧಾವಂತದಲ್ಲಿ ಅವಸರದ ಸುದ್ದಿ ಕೊಡದೆ, ಮಾಹಿತಿ ಖಚಿತಗೊಂಡ ಬಳಿಕವಷ್ಟೇ ಪ್ರಕಟಿಸಲಾಗುತ್ತದೆ. ಅತಿರಂಜಿತ ಸುದ್ದಿ ಇಲ್ಲಿಲ್ಲ. ಇದು www.bantwalnews.com ಧ್ಯೇಯ.

Be the first to comment on "ವಂಡರ್ ಲಾ ನೆರವು: ಕಡೇಶಿವಾಲಯ ಹಿರಿಯ ಪ್ರಾಥಮಿಕ ಶಾಲೆಯಲ್ಲೀಗ ಸುಸಜ್ಜಿತ ಶೌಚಾಲಯ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*