ಬಂಟ್ವಾಳ

ಬಂಟ್ವಾಳ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪ್ರಶಾಂತ್ ಪುಂಜಾಲಕಟ್ಟೆ ಆಯ್ಕೆ

ಬಂಟ್ವಾಳ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪ್ರಶಾಂತ್ ಪುಂಜಾಲಕಟ್ಟೆ ಆಯ್ಕೆ

ಬಂಟ್ವಾಳ: ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪ್ರಶಾಂತ್ ಪುಂಜಾಲಕಟ್ಟೆ ಆಯ್ಕೆ ಆಗಿದ್ದಾರೆ. ಬಂಟ್ವಾಳ  ಪ್ರೆಸ್ ಕ್ಲಬ್ ನಲ್ಲಿ ಮಂಗಳವಾರ ಸಂಘದ ಅಧ್ಯಕ್ಷ ಹರೀಶ್ ಮಾಂಬಾಡಿ ಅಧ್ಯಕ್ಷತೆಯಲ್ಲಿ ನಡೆದ ಮಹಾ ಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಚುನಾವಣಾ ಪ್ರಕ್ರಿಯೆಯನ್ನು ನಡೆಸಿದರು.

ನೂತನ ಉಪಾಧ್ಯಕ್ಷರಾಗಿ ಯಾದವ್ ಅರ್ಗಬೈಲ್, ಪ್ರಧಾನ ಕಾರ್ಯದರ್ಶಿಯಾಗಿ ಮೌನೇಶ್ ವಿಶ್ವಕರ್ಮ, ಜೊತೆ ಕಾರ್ಯದರ್ಶಿಯಾಗಿ ಇಮ್ತಿಯಾಝ್ ಶಾ ತುಂಬೆ, ಕೋಶಾಧಿಕಾರಿಯಾಗಿ ವೆಂಕಟೇಶ್ ಬಂಟ್ವಾಳ ಆಯ್ಕೆಯಾದರು. ಸಭೆಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಅಲಿ ವಿಟ್ಲ ವರದಿ ವಾಚಿಸಿದರು. ಕೋಶಾಧಿಕಾರಿ ಯಾದವ್ ಅಗ್ರಬೈಲ್ ಲೆಕ್ಕಪತ್ರ ಮಂಡಿಸಿದರು. ಅಧ್ಯಕ್ಷ ಹರೀಶ್ ಮಾಂಬಾಡಿ ಮಾತನಾಡಿ ನೂತನ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರ ಮಾಡಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ