ವಿಟ್ಲ

ಅಡ್ಯನಡ್ಕದಲ್ಲಿ ಕೆರೆಯಲ್ಲಿ ಮುಳುಗಿ ಮಂಗಳೂರಿನ ಮಹಿಳೆ ಸಾವು

ವಿಟ್ಲ: ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ಅಡ್ಯನಡ್ಕದಲ್ಲಿರುವ ವಾರಣಾಸಿ ಫಾರ್ಮ್ ಹೌಸ್ ನಲ್ಲಿ ಕೆರೆಯಲ್ಲಿ ಮುಳುಗಿ ಮಂಗಳೂರಿನ ವೈದ್ಯೆ ಮೈಜಿ ಕರೋಲ್ ಫೆರ್ನಾಂಡೀಸ್ (31) ಸಾವನ್ನಪ್ಪಿದ್ದಾರೆ. ಮಂಗಳವಾರ ಸಂಜೆ ಘಟನೆ ನಡೆದಿದ್ದು, ಬುಧವಾರ ಬೆಳಗ್ಗೆ ಆಕೆ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. ವಿಟ್ಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕೃಷಿ ಅದ್ಯಯನದ ಬಗ್ಗೆ ಆಸಕ್ತಿಯನ್ನು ಹೊಂದಿದ್ದ ಈಕೆ ಈ ಪ್ರದೇಶಕ್ಕೆ ಅಧ್ಯಯನಕ್ಕೆಂದು ತೆರಳಿದ್ದಾಗಿ ತಿಳಿಸಲಾಗಿದ್ದು, ಸಂಜೆ ಯಾರು ಇಲ್ಲದ ಸಮಯ ಫಾರ್ಮ್ ಹೌಸನಲ್ಲಿದ್ದ ಕೆರೆಯಲ್ಲಿ ಈಜಲು ಹೋಗಿದವರು ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿದ್ದ ವೇಳೆ ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಬಂದು ಬಳಿಕ ಮಂಗಳೂರಿನ ಖಾಸಗಿ ಆಸ್ವತ್ರೆಗೆ ಕರೆದುಕೊಂಡು ಹೋದಾಗ ವೈದ್ಯಾದಿಕಾರಿಯವರು ಪರಿಕ್ಷೀಸಿ ಮೃತಪಟ್ಟಿರುವುದಾಗಿ ತಿಳಿಸಿದ್ದಾಗಿ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ