ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳ, ರೋಟರಿ ಆನ್ಸ್ ಕ್ಲಬ್, ಆಯುಷ್ ಇಲಾಖೆ, ಸ್ತ್ರೀಶಕ್ತಿ ಒಕ್ಕೂಟ, ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶುಅಭಿವೃದ್ದಿ ಯೋಜನೆ ಬಂಟ್ವಾಳ ವತಿಯಿಂದ ಪೋಷಣ್ ಮಾಸಾಚರಣೆ ಕಾರ್ಯಕ್ರಮ ಹಾಗೂ ಸ್ತ್ರೀಶಕ್ತಿ ಸಂಘದ ಸದಸ್ಯರು ತಯಾರಿಸಿದ ವಸ್ತುಪ್ರದರ್ಶನ ಮಾರಾಟ ಮೇಳದ ಉದ್ಘಾಟನೆ ಬಿ.ಸಿ.ರೋಡಿನ ರೋಟರಿ ಕ್ಲಬ್ ಸಭಾಂಗಣದಲ್ಲಿ ಬುಧವಾರ ನಡೆಯಿತು.
ರೋಟರಿ ಕ್ಲಬ್ ಬಂಟ್ವಾಳ ಅಧ್ಯಕ್ಷ ಮಹಮ್ಮದ್ ವಳವೂರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಆರೋಗ್ಯ ರಕ್ಷಣೆ ಕುರಿತ ಕಾರ್ಯಕ್ರಮಗಳಿಗೆ ರೋಟರಿ ಕ್ಲಬ್ ಬೆಂಬಲಿಸುತ್ತದೆ ಎಂದರು.ರೋಟರಿ ಕ್ಲಬ್ ಕೋಶಾಧಿಕಾರಿ ಬೇಬಿ ಕುಂದರ್ ಮಾತನಾಡಿ, ಅಂಗನವಾಡಿ ಕಾರ್ಯ ಕರ್ತರು ಕೊರೊನಾ ಸಂದರ್ಭದಲ್ಲಿ ಮಾಡಿದ ಅನನ್ಯ ಸೇವೆಯನ್ನು ಗುರುತಿಸಿ ಗೌರವ ನೀಡುವ ಕೆಲಸ ಆಗಬೇಕಾಗಿದೆ ಎಂದರು.ಸ್ತ್ರೀ ಶಕ್ತಿ ಒಕ್ಕೂಟದ ಸದಸ್ಯರ ವಸ್ತಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಪಾಪ ಬೋವಿ ಉದ್ಘಾಟಿಸಿದರು. ಬಂಟ್ವಾಳ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗಾಯತ್ರಿ ಕಂಬಳಿ ಪ್ರಾಸ್ತಾವಿಕ ಮಾತನಾಡಿದರು. ಆಯುಷ್ ಇಲಾಖೆ ವೈದ್ಯಾಧಿಕಾರಿ ಡಾ,.ಮಣಿಕರ್ಣಿಕ ಆರೋಗ್ಯ ಮಾಹಿತಿ ನೀಡಿದರು. ಸಹಾಯಕ ಶಿಶುಅಭಿವೃದ್ಧಿ ಯೋಜನಾಧಿಕಾರಿ ಶೀಲಾವತಿ, ಸ್ತ್ರೀ ಶಕ್ತಿ ಒಕ್ಕೂಟದ ಸದಸ್ಯರಾದ ಸುಜಾತ, ಜಲಜ ಉಪಸ್ಥಿತರಿದ್ದರು. ಮೇಲ್ವಿಚಾರಕಿ ಶಾಲಿನಿ ಕಾರ್ಯಕ್ರಮ ನಿರೂಪಿಸಿದರು. ಪೌಷ್ಟಿಕ ಆಹಾರದ ಮಾಹಿತಿ ನೀಡುವ ರಂಗೋಲಿ ಕಾರ್ಯಕ್ರಮಗಳನ್ನು ಆಯೋಜಿಸಲಾಯಿತು.