ಬಂಟ್ವಾಳ

ಬಂಟ್ವಾಳ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದಿಂದ ವಿಶ್ವಕರ್ಮ ದಿನಾಚರಣೆ

ವಿಶ್ವಗುರು ವಿಶ್ವಕರ್ಮ ಅವರು ದ್ವಾರಕಾ ನಗರವನ್ನು ನಿರ್ಮಿಸಿಕೊಟ್ಟ ಪುಣ್ಯ ದಿನವನ್ನುವಿಶ್ವಕರ್ಮ ದಿನವಾಗಿ ದೇಶದಾದ್ಯಂತ ಆಚರಿಸಲಾಗುತ್ತಿದೆ ಎಂದು ಎಸ್.ವಿ.ಎಸ್. ಪ್ರೌಢಶಾಲೆಯ ಸಂಸ್ಕೃತ ಶಿಕ್ಷಕ ಮುರಳೀಧರ  ಆಚಾರ್ಯರು ಹೇಳಿದರು.

ಅವರು ಬಂಟ್ವಾಳ ಬಿಜೆಪಿ ಓಬಿಸಿ ಮೋರ್ಚಾ ಏರ್ಪಡಿಸಿದ ವಿಶ್ವಕರ್ಮ ದಿನಾಚರಣೆಯ ಕಾರ್ಯಕ್ರಮದಲ್ಲಿ ಪ್ರಮುಖ ಭಾಷಣಕಾರರಾಗಿ ಭಾಗವಹಿಸಿದ್ದರು.

ಅಧ್ಯಕ್ಷತೆಯನ್ನು ಮಂಡಲ ಬಿಜೆಪಿ ಓಬಿಸಿ ಮೋರ್ಚಾದ ಅಧ್ಯಕ್ಷರಾದ ಆನಂದ ಶಂಭೂರು ವಹಿಸಿಕೊಂಡಿದ್ದರು. ಮಂಡಲ ಬಿಜೆಪಿ ಉಪಾಧ್ಯಕ್ಷರಾದ ಚಿದಾನಂದ ರೈ, ಪ್ರಧಾನ ಕಾರ್ಯದರ್ಶಿ ಡೊಂಬಯ ಅರಳ,  ಓಬಿಸಿ ಮೋರ್ಚಾದ ಮಂಡಲ ಪ್ರಭಾರಿ ಪ್ರಕಾಶ್ ಅಂಚನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಜಾಹೀರಾತು

ಕಾರ್ಯಕ್ರಮದಲ್ಲಿ ಬಂಟ್ವಾಳ ಬಿಜೆಪಿ ಮಂಡಲ ಕಾರ್ಯದರ್ಶಿ ರಮಾನಾಥ ರಾಯಿ ಜಿಲ್ಲಾ ಓಬಿಸಿ ಮೋರ್ಚಾದ ಉಪಾಧ್ಯಕ್ಷರಾದ ಪುರುಷೋತ್ತಮ, ಬಂಟ್ವಾಳ ಓಬಿಸಿ ಮೋರ್ಚಾದ ಉಪಾಧ್ಯಕ್ಷರಾದ ಗೋಪಾಲ, ಕಾರ್ಯದರ್ಶಿ ಚಿದಾನಂದ, ಪ್ರಮುಖರಾದ ಜಯಪ್ರಕಾಶ್ ಆಚಾರ್ಯ ಭಂಡಾರಿಬೆಟ್ಟು, ಹರೀಶ್ ಆಚಾರ್ಯ ರಾಯಿ, ಲಕ್ಷ್ಮಿ ಗೋಪಾಲಾಚಾರ್ಯ ಬಾಳ್ತಿಲ, ವಾಮನ ಆಚಾರ್ಯ ಅಮ್ಮುಂಜೆ, ಮುಂತಾದವರು ಭಾಗವಹಿಸಿದ್ದರು. ಮಂಡಲ ಓಬಿಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಉಮೇಶ್ ಅರಳ ಸ್ವಾಗತಿಸಿ, ಕಾರ್ಯದರ್ಶಿ ಮೋಹನದಾಸ್  ಕೊಠಾರಿ ವಂದಿಸಿದರು. ರಮೇಶ್ ಪುರೋಹಿತರು ಪ್ರಾರ್ಥನಾ ಶ್ಲೋಕ ಹೇಳಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts