




ಬಂಟ್ವಾಳ: ದೇವಸ್ಥಾನ, ದೈವಸ್ಥಾನ ಮತ್ತು ಪ್ರಾರ್ಥನಾ ಮಂದಿರ ತೆರವುಗೊಳಿಸುವುದರ ವಿರುದ್ಧ ಕಾಂಗ್ರೆಸ್ ನಿಂದ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಬಿ.ಸಿ.ರೋಡಿನ ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನದ ಮುಂಭಾಗ ಶನಿವಾರ ಬೆಳಗ್ಗೆ 10 ಗಂಟೆಗೆ ಪ್ರತಿಭಟನೆ ನಡೆಯಲಿದೆ. ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ನಡೆಯುವ ಈ ಪ್ರತಿಭಟನೆಯಲ್ಲಿ ಪಕ್ಷದ ಮುಖಂಡರು ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

Be the first to comment on "ಕಾಂಗ್ರೆಸ್ ನಿಂದ ಶನಿವಾರ ಬಿ.ಸಿ.ರೋಡಿನ ಶ್ರೀ ರಕ್ತೇಶ್ವರಿ ದೇವಸ್ಥಾನ ಮುಂಭಾಗ ರೈ ನೇತೃತ್ವದಲ್ಲಿ ಪ್ರತಿಭಟನೆ"