ಬಂಟ್ವಾಳ: ನಂಜನಗೂಡಿನಲ್ಲಿ ದೇವಸ್ಥಾನವನ್ನು ಧ್ವಂಸ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಇಂದು ಬಿಜೆಪಿಯ ಜನಪ್ರತಿನಿಧಿಗಳು ಅಧಿಕಾರಿಗಳ ಮೇಲೆ ದೋಷಾರೋಪಣೆ ಮಾಡುತ್ತಿದ್ದು, ವಾಸ್ತವವಾಗಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರವೇ ನೇರ ಹೊಣೆಗಾರ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.
ದೇವಸ್ಥಾನ, ದೈವಸ್ಥಾನ ಮತ್ತು ಪ್ರಾರ್ಥನಾ ಮಂದಿರ ತೆರವುಗೊಳಿಸುವುದರ ವಿರುದ್ಧ ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಬಿ.ಸಿ.ರೋಡಿನ ಫ್ಲೈಓವರ್ ಅಡಿಯಲ್ಲಿ ಶನಿವಾರ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಬಿಜೆಪಿಯವರಿಂದಲೇ ಹಿಂದುಗಳಿಗೆ ಅನ್ಯಾಯವಾಗುತ್ತಿದೆ. ಕಾಂಗ್ರೆಸ್ ಪಕ್ಷ ಎಲ್ಲ ಧರ್ಮದವರನ್ನೂ ಸಮಾನವಾಗಿ ನೋಡುವ ಪಕ್ಷವಾಗಿದ್ದು, ಹಿಂದುಗಳಿಗೆ ಅನ್ಯಾಯವಾದಾಗ ಪ್ರತಿಭಟನೆ ನಡೆಸುತ್ತಿದ್ದೇವೆ. ಬಿಜೆಪಿಯ ಸಂಸದರು, ಮಂತ್ರಿಗಳು, ನಾಯಕರು ಇಂದು ದೇವಸ್ಥಾನ ಧ್ವಂಸ ಪ್ರಕರಣಕ್ಕೆ ಅಧಿಕಾರಿಗಳನ್ನು ಹೊಣೆಗಾರರನ್ನಾಗಿಸುತ್ತಿದ್ದಾರೆ. ಆದರೆ ಅವರೇ ಇದರ ಜವಾಬ್ದಾರರು ಎಂದರು.
ಪ್ರತಿಭಟನಾ ಸಭೆಯ ಬಳಿಕ ಬಂಟ್ವಾಳ ತಹಶೀಲ್ದಾರ್ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಿ.ಸಿ.ರೋಡ್, ಬಂಟ್ವಾಳ ತಾಪಂ ಮಾಜಿ ಉಪಾಧ್ಯಕ್ಷ ಅಬ್ಬಾಸ್ ಅಲಿ, ಜಿಪಂ ಮಾಜಿ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಪದ್ಮಶೇಖರ್ ಜೈನ್, ಎಂ.ಎಸ್.ಮುಹಮ್ಮದ್, ತಾಲೂಕ ಪಂಚಾಯತ್ ಸ್ಥಾಯಿ ಸಮಿತಿಮಾಜಿ ಅಧ್ಯಕ್ಷರಾದ ಮಲ್ಲಿಕಾ ವಿ ಶೆಟ್ಟಿ,ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಮಹಿಳಾ ಅಧ್ಯಕ್ಷರಾದ ವಿಲ್ಮಾ ಮೋರಸ್ ಹಾಗೂ ಜಯಂತಿ ವಿ ಪೂಜಾರಿ,ದ.ಕ. ಜಿಲ್ಲಾ ಕಿಸಾನ್ ಘಟಕದ ಅಧ್ಯಕ್ಷ ಮೋಹನ್ ಗೌಡ ಕಲ್ಮಂಜ, ಕೆಪಿಸಿಸಿ ಸಂಯೋಜಕ ಬೊಂಡಾಲ ಚಿತ್ತರಂಜನ್ ಶೆಟ್ಟಿ, ಬಂಟ್ವಾಳ ಪುರಸಭಾ ಅಧ್ಯಕ್ಷ ಮುಹಮ್ಮದ್ ಶರೀಫ್, ಉಪಾಧ್ಯಕ್ಷೆ ಜೆಸಿಂತಾ, ಸದಸ್ಯ ಅಬೂಬಕ್ಕರ್ ಸಿದ್ದೀಕ್, ಗಂಗಾಧರ್, ಗಾಯತ್ರಿ ಪ್ರಸಾದ್, ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ನವಾಝ್ ಬಡಕಬೈಲ್, ಬಂಟ್ವಾಳ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಸುರೇಶ್ ಜೋರ, ಇರಾ ಗ್ರಾಪಂ ಮಾಜಿ ಅಧ್ಯಕ್ಷ ರಝಾಕ್ ಕುಕ್ಕಾಜೆ, ಬೂಡಾ ಮಾಜಿ ಅಧ್ಯಕ್ಷ ಸದಾಶಿವ ಬಂಗೇರ, ಎಪಿಎಂಸಿ ಮಾಜಿಅಧ್ಯಕ್ಷರಾದ ಪದ್ಮನಾಭ ರೈ,ಪ್ರಮುಖರಾದ ಮಾಯಿಲಪ್ಪ ಸಾಲಿಯಾನ್, ಸುದರ್ಶನ್ ಜೈನ್, ಪದ್ಮನಾಭ ರೈ, ಮುಹಮ್ಮದ್ ನಂದಾವರ, ಚಂದ್ರಶೇಖರ ಪೂಜಾರಿ, ವೆಂಕಪ್ಪ ಪೂಜಾರಿ, ಪ್ರವೀಣ್ ರೊಡ್ರಿಗಸ್ ಮೊದಲಾದವರು ಉಪಸ್ಥಿತರಿದ್ದರು.