ರಾಯಿ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾಗಿ ದುರ್ಗಾದಾಸ್ ಶೆಟ್ಟಿ ಕರೆಂಕಿಜೆ

ದುರ್ಗಾದಾಸ್ ಶೆಟ್ಟಿ
ದಿನೇಶ್ ಸುವರ್ಣ ರಾಯಿ

ಬಂಟ್ವಾಳ: ಇಲ್ಲಿನ ರಾಯಿ ಸಮೀಪದ ಪ್ರಸಿದ್ಧ ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಪ್ರಯುಕ್ತ ರಚಿಸಿದ ನೂತನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾಗಿ ಸ್ಥಳೀಯ ಉದ್ಯಮಿ ದುರ್ಗಾದಾಸ್ ಶೆಟ್ಟಿ ಕರೆಂಕಿಜೆ ಆಯ್ಕೆಯಾಗಿದ್ದಾರೆ.

ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ ಅಧ್ಯಕ್ಷತೆಯಲ್ಲಿ ಭಾನುವಾರ ದೇವಳದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ಸಮಿತಿ ಗೌರವಾಧ್ಯಕ್ಷರಾಗಿ ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು, ಉಪಾಧ್ಯಕ್ಷರಾಗಿ ವಸಂತ ಕುಮಾರ್ ಅಣ್ಣಳಿಕೆ, ಜಗದೀಶ ಕೊಯಿಲ, ರಶ್ಮಿತ್ ಶೆಟ್ಟಿ ಕೈತ್ರೋಡಿ, ಸಂತೋಷ್ ಚೌಟ ಮಡಂದೂರು, ದೇವಪ್ಪ ಕುಲಾಲ್ ಪಂಜಿಕಲ್ಲು, ಪ್ರಭಾಕರ ಪ್ರಭು ಕರ್ಪೆ, ಪ್ರಧಾನ ಕಾರ್ಯದರ್ಶಿಯಾಗಿ ದಿನೇಶ ಸುವರ್ಣ ರಾಯಿ, ಕಾರ್ಯದರ್ಶಿಯಾಗಿ ಮೋಹನ್ ಕೆ.ಶ್ರೀಯಾನ್, ರಾಮಚಂದ್ರ ಶೆಟ್ಟಿಗಾರ್ ಅಣ್ಣಳಿಕೆ, ಕೋಶಾಧಿಕಾರಿಯಾಗಿ ರವೀಂದ್ರ ಪೂಜಾರಿ, ಜೊತೆ ಕಾರ್ಯದರ್ಶಿಯಾಗಿ ರಾಜ್ ಹೊಳ್ಳ, ಸಂತೋಷ್ ಕುಮಾರ್ ಬೆಟ್ಟು ಆಯ್ಕೆಗೊಂಡಿದ್ದಾರೆ. ಇದೇ ವೇಳೆ ೨೫ ಮಂದಿ ಕಾರ್ಯಕಾರಿ ಸಮಿತಿ ಸದಸ್ಯರಾಗಿ ನೇಮಕಗೊಂಡರು. ಕ್ಷೇತ್ರದ ತಂತ್ರಿ ಶ್ರೀಪಾದ ಪಾಂಗಣ್ಣಾಯ, ಪ್ರಧಾನ ಅರ್ಚಕ ಸುಂದರ ಹೊಳ್ಳ ಮತ್ತಿತರರು ಇದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು

About the Author

Bantwal News
2016 ನವೆಂಬರ್ 10ರಂದು ಆರಂಭಗೊಂಡ ಬಂಟ್ವಾಳದ ಮೊದಲ ವೆಬ್ ಪತ್ರಿಕೆ ಇದು. 25 ಲಕ್ಷಕ್ಕಿಂತಲೂ ಅಧಿಕ ಮಂದಿ ಕೇವಲ 45 ತಿಂಗಳಲ್ಲೇ ಓದಿದ ಜಾಲತಾಣವಿದು. ಸಂಪಾದಕ: ಹರೀಶ ಮಾಂಬಾಡಿ. ಬ್ರೇಕಿಂಗ್ ನ್ಯೂಸ್ ಧಾವಂತದಲ್ಲಿ ಅವಸರದ ಸುದ್ದಿ ಕೊಡದೆ, ಮಾಹಿತಿ ಖಚಿತಗೊಂಡ ಬಳಿಕವಷ್ಟೇ ಪ್ರಕಟಿಸಲಾಗುತ್ತದೆ. ಅತಿರಂಜಿತ ಸುದ್ದಿ ಇಲ್ಲಿಲ್ಲ. ಇದು www.bantwalnews.com ಧ್ಯೇಯ.

Be the first to comment on "ರಾಯಿ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾಗಿ ದುರ್ಗಾದಾಸ್ ಶೆಟ್ಟಿ ಕರೆಂಕಿಜೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*