Uncategorized

27ರಂದು ಬಿ.ಸಿ.ರೋಡಿನಲ್ಲಿ ಹೆದ್ದಾರಿ ತಡೆ, ಪ್ರತಿಭಟನಾ ಸಭೆ

ಬಂಟ್ಚಾಳ:  ಕೇಂದ್ರ ಸರ್ಕಾರ ರೈತ, ದಲಿತ, ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಸೆ.27ರಂದು ಬಿ.ಸಿ.ರೋಡಿನ ಬ್ರಹ್ಮಶ್ರೀ ನಾರಾಯಣಗುರು ವೃತ್ತದಲ್ಲಿ ಜಿಲ್ಲಾ ಮಟ್ಟದ ಹೆದ್ದಾರಿ ತಡೆ ಪ್ರತಿಭಟನೆ ನಡೆಯಲಿದೆ.

ಈ ವಿಷಯವನ್ನು ಬಿ.ಸಿ.ರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ರೈತಸಂಘದ ಜಿಲ್ಲಾ ಕಾರ್ಯದರ್ಶಿ ಪ್ರೇಮನಾಥ ಶೆಟ್ಟಿ ಬಾಳ್ತಿಲ ತಿಳಿಸಿದರು.

ರಾಷ್ಟ್ರದಾದ್ಯಂತ ಈಗಾಗಲೇ ಭಾರತ ಬಂದ್ ಗೆ ಕರೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಬಿ.ಸಿ.ರೋಡಿನ ಮಿ‌ನಿ ವಿಧಾನಸೌಧ ಮುಂಭಾಗದಿಂದ ನಾರಾಯಣಗುರು ವೃತ್ತದವರೆಗೆ ಜಾಥಾ ನಡೆಯಲಿದೆ. ಇದು ಜಿಲ್ಲಾ ಮಟ್ಟದ ಕಾರ್ಯಕ್ರಮವಾಗಿದ್ದು ವಿವಿಧ ಸಂಘಟನೆಗಳ ಬೆಂಬಲ ಇದೆ ಎಂದವರು ಮಾಹಿತಿ ನೀಡಿದರು.

ರೈತರ ಹೋರಾಟದ ಕುರಿತು ಗೇಲಿ ಮಾಡಲಾಗುತ್ತಿದ್ದು, ಇದು ಖಂಡನೀಯ ಎಂದು ಸಿಐಟಿಯು ಜಿಲ್ಲಾ ಕಾರ್ಯದರ್ಶಿ ರಾಮಣ್ಣ ವಿಟ್ಲ ಈ ಸಂದರ್ಭ ಹೇಳಿದರು. ರಾಜ್ಯ ರೈತ ಸಂಘ ಬಂಟ್ವಾಳ ತಾಲೂಕು ಸಂಘಟನಾ ಕಾರ್ಯದರ್ಶಿ ಸದಾನಂದ ಶೀತಲ್, ಕೋಶಾಧಿಕಾರಿ ಡಿ.ಕೆ.ಸಾಹುಲ್ ಹಮೀದ್, ಡಿವೈಎಫ್ ಐ ಬಂಟ್ವಾಳ ತಾಲೂಕು ಕಾರ್ಯದರ್ಶಿ ನ್ಯಾಯವಾದಿ ತುಳಸೀದಾಸ್ ವಿಟ್ಲ ಸುದ್ದಿಗೋಷ್ಠಿಯಲ್ಲಿ ಜತೆಗಿದ್ದರು.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts